ಮಾದರಿ ನೀತಿಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು: ಜಿಲ್ಲಾಧಿಕಾರಿ
0
ಮಾರ್ಚ್ 15, 2019
ಕಾಸರಗೋಡು: ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಮಾದರಿ ನೀತಿಸಂಹಿತೆ ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಆದೇಶ ನೀಡಿದರು.
ಚುನಾವಣೆ ನೀತಿಸಂಹಿತೆ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜಾತಿ, ಜನಾಂಗ,ಮತ,ಭಾಷೆ ಇತ್ಯಾದಿ ವಿಚಾರಗಳಲ್ಲಿ ಸಂಘರ ಉಂಟುಮಾಡುವಂತೆ ಪ್ರಚೋದನೆ ನಡೆಸಕೂಡದು. ಮತಯಾಚನೆಗೆ, ಪ್ರಚಾರಕ್ಕೆ ಆರಾಧನಾಲಯಗಳನ್ನು ವೇದಿಕೆಯಾಗಿಸಬಾರದು ಎಂದು ಜಿಲ್ಲಾ ಚುನಾವಣಾಧಿಕಾರಯೂ ಆಗಿರುವ ಜಿಲ್ಲಾಧಿಕಾರಿ ಹೇಳಿರುವರು.

