ಜಿಲ್ಲಾಮಟ್ಟಕ್ಕೆ ಆಯ್ಕೆ
0
ಮಾರ್ಚ್ 09, 2019
ಮುಳ್ಳೇರಿಯ: 2018-19ನೇ ಸಾಲಿನ ವಿಜ್ಞಾನ ಸಾಹಿತ್ಯ ಪರಿಷತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ನಡೆಸುವ ಯುರೇಕ ಶಾಸ್ತ್ರ ಕೇರಳ ವಿಜ್ಞಾನೋತ್ಸವದಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಕುಂಟಾರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಭೂಮಿಕಾ ಆಯ್ಕೆಯಾಗಿದ್ದಾಳೆ. ಇವಳನ್ನು ಶಾಲೆಯ ರಕ್ಷಕ ಶಿಕ್ಷಕ ಸಂಘ, ವ್ಯವಸ್ಥಾಪಕರು, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.




