ಬದಿಯಡ್ಕ: ಮಾಡತ್ತಡ್ಕ ಶ್ರೀ ದೈವಗಳ ಸೇವಾಸಮಿತಿ ಹಾಗೂ ಶ್ರೀ ಹರಿಹರ ಭಜನಾ ಮಂದಿರದ ವಾರ್ಷಿಕೋತ್ಸವ, ದೈವಗಳಿಗೆ ತಂಬಿಲ ಸೇವೆ ಹಾಗೂ ಆಶ್ಲೇಷ ಪೂಜೆಯು ಶನಿವಾರ ವಿಜೃಂಭಣೆಯಿಂದ ಜರಗಿತು.
ಹಿರಿಯರಾದ ಮಿಂಚಿನಡ್ಕ ಗೋವಿಂದ ಭಟ್ ದೀಪಜ್ವಲನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಳಿಗ್ಗೆ ಗಣಪತಿ ಹೋಮ, ಬ್ರಹ್ಮಶ್ರೀ ವೇದಮೂರ್ತಿ ಪಾಂಡೇಲು ಶಿವಶಂಕರ ಭಟ್ಟರ ನೇತೃತ್ವದಲ್ಲಿ ವಿಶೇಷ ಆಶ್ಲೇಷ ಪೂಜೆ ನಡೆಯಿತು. ಊರಪರವೂರ ಭಕ್ತಾದಿಗಳು ಭಜನಾ ಸೇವೆಯಲ್ಲಿ ಪಾಲ್ಗೊಂಡರು. ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ನೂರಾರು ಮಂದಿ ಭಕ್ತಾದಿಗಳು ಭೋಜನ ಪ್ರಸಾದ ಸ್ವೀಕರಿಸಿದರು. ಅಪರಾಹ್ನ ಶ್ರೀ ದೈವಗಳಿಗೆ ತಂಬಿಲ ಸೇವೆ ಜರಗಿತು.
