ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ಉಮಾ ಭಾರತಿ ನೇಮಕ
0
ಮಾರ್ಚ್ 25, 2019
ನವದೆಹಲಿ: ಕೇಂದ್ರ ಸಚಿವೆ ಉಮಾ ಭಾರತಿ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ ಎಂದು ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಉಮಾ ಭಾರತಿಯವರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ತಮ್ಮ ನಿರ್ಧಾರವನ್ನು ತಿಳಿಸಿದ್ದರಿಂದ ಪಕ್ಷ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ನೇಮಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ನಡ್ಡಾ ತಿಳಿಸಿದರು.
ತಾವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಬದಲಾಗಿ ಪಕ್ಷದಲ್ಲಿ ಬೇರೆ ಜವಾಬ್ದಾರಿಗಳನ್ನು ನೀಡಿದರೆ ಸಂತೋಷದಿಂದ ಒಪ್ಪಿಕೊಳ್ಳುತ್ತೇನೆ ಎಂದು ಕುಡಿಯುವ ನೀರು ಮತ್ತು ಶುಚಿತ್ವ ಇಲಾಖೆಯ ಕೇಂದ್ರ ಸಚಿವೆಯಾಗಿದ್ದ ಉಮಾ ಭಾರತಿ ರಾಷ್ಟ್ರೀಯ ನಾಯಕರಿಗೆ ತಮ್ಮ ಸ್ಪಷ್ಟ ನಿರ್ಧಾರವನ್ನು ತಿಳಿಸಿದ್ದರು.

