ವಿದ್ಯಾಬೋಧಿನಿ ಶಾಲೆಯ ವಜ್ರಮಹೋತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ
0
ಮಾರ್ಚ್ 15, 2019
ಮಂಜೇಶ್ವರ: ವರ್ಕಾಡಿ ಸಮೀಪದ ಬಜಲಕರಿಯ ಶ್ರೀ ವಿದ್ಯಾಬೋಧಿನಿ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ವಜ್ರಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಜರಗಿತು.
ವಜ್ರಮಹೋತ್ಸವ ಸಮಿತಿ ಅಧ್ಯಕ್ಷ ಇಬ್ರಾಹಿಂ ಹಾಜಿ ಕಲ್ಲೂರು ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲಾಕ್ ನಿರೂಪಣಾಧಿಕಾರಿ ವಿಜಯ ಕುಮಾರ್ ಪಿ, ಶಾಲಾ ಸಂಚಾಲಕ ಅಜಿತ್ ಪ್ರಸಾದ್ ನಾಯ್ಕ್, ಅಝೀಝ್ ನಚ್ಚಪದವು, ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ಶಿಕ್ಷಕರು ಹಾಗು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ವಜ್ರಮಹೋತ್ಸವ ಕಾರ್ಯಕ್ರಮ ಮಾ.31 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.




