ಅಧ್ಯಯನ ಕೇಂದ್ರದ ಯಕ್ಷಮಂಗಳ ಪ್ರಶಸ್ತಿ ಮತ್ತು ಕೃತಿ ಪ್ರಶಸ್ತಿ ಪ್ರಧಾನ
0
ಮಾರ್ಚ್ 16, 2019
ಮಂಗಳೂರು: ಯಕ್ಷಗಾನದ ಖ್ಯಾತ ಕಲಾವಿದರಾದ ಕುಂಬ್ಳೆ ಸುಂದರ ರಾವ್ ಮತ್ತು ಗೋಡೆ ನಾರಾಯಣ ಹೆಗ್ಡೆಯವರಿಗೆ ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಅಧ್ಯಯನ ಕೇಂದ್ರ ಶುಕ್ರವಾರ ಆಯೋಜಿಸಿದ್ದ ಯಕ್ಷಮಂಗಳ ಪ್ರಶಸ್ತಿ ನೀಡಿ ಗೌರವಿಸಿತು. ಈ ಸಂದರ್ಭ ಡಾ. ಜಿ.ಎಸ್. ಭಟ್ಟ ಅವರಿಗೆ ಯಕ್ಷಮಂಗಳ ಕೃತಿ ಪ್ರಶಸ್ತಿ ಪ್ರದಾನವನ್ನೂ ಮಾಡಲಾಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಭಾರ ಉಪಕುಲಪತಿ ಪ್ರೊ. ಕಿಶೋರಿ ನಾಯಕ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ, ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಡಾ. ಧನಂಜಯ ಕುಂಬ್ಳೆ ಮತ್ತು ಡಾ. ರಾಜಶ್ರೀ ಮೊದಲಾದವರು ಉಪಸ್ಥಿತರಿದ್ದರು.

