ಕನ್ನಡ ಸಾಹಿತ್ಯ ಸಮ್ಮೇಳನ- ಸಮಿತಿ ವಿಸರ್ಜನೆ
0
ಮಾರ್ಚ್ 21, 2019
ಬದಿಯಡ್ಕ: ಕನ್ನಡ ಸಾಹಿತ್ಯ ಪರಿಷತ್ ಕಳೆದ ಜನವರಿ ತಿಂಗಳಿನಲ್ಲಿ ನಡೆಸಿದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದ ಲೆಕ್ಕಪತ್ರ ಮಂಡನೆ, ಅಂಗೀಕಾರ ಸಭೆ ನೀರ್ಚಾಲಿನ ಸೈಯರ್ ಸೆಕೆಂಡರಿ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.
ಸಭೆಯಲ್ಲಿ ಇತ್ತೀಚೆಗೆ ಅಗಲಿದ ಹಿರಿಯ ಲೇಖಕ, ಕಲಾವಿದ, ಸಂಘಟಕ, ನಿವೃತ್ತ ಮುಖ್ಯೋಪಾಧ್ಯಾಯ ಕೇಳು ಮಾಸ್ಟರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕ.ಸಾ.ಪ. ಗೌರವ ಕಾರ್ಯದರ್ಶಿ ರಾಮಚಂದ್ರ ಭಟ್ ಆಯವ್ಯಯ ಮಂಡಿಸಿದರು. ಸ್ವಾಗತ ಸಮಿತಿ ಉಪಾಧ್ಯಕ್ಷರಾದ ಮಹಾಲಿಂಗೇಶ್ವರ ಭಟ್ ಎಂ.ವಿ, ವಿ.ಬಿ.ಕುಳಮರ್ವ ಮೊದಲಾದವರು ಮಾತನಾಡಿದರು.
ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಎಸ್.ವಿ.ಭಟ್ ಅಧ್ಯಕ್ಷತೆ ವಹಿಸಿ ಸಮ್ಮೇಳನ ನಡೆದ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಪ್ರಬಂಧಕ ಜಯದೇವ ಖಂಡಿಗೆ ಅವರಿಗೆ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಿದರು. ಸಭೆಯಲ್ಲಿ ಶಿವಪ್ರಕಾಶ್ ಎಂ.ಕೆ, ಉದನೇಶವೀರ, ಬಾಲಮಧುರಕಾನನ, ರವಿಶಂಕರ ದೊಡ್ಡಮಾಣಿ, ಡಾ.ಬೇ.ಸಿ.ಗೋಪಾಲಕೃಷ್ಣ, ಸುಂದರ ಬಾರಡ್ಕ, ಅರ್ಜುನಗುಳಿ ಎಸ್.ಎನ್.ಭಟ್, ಉಷಾ ಅರ್ಜುನಗುಳಿ, ಸವಿತಾ ಅರ್ಜುನಗುಳಿ, ಕೃಷ್ಣ ಪ್ರಸಾದ ಅರ್ಜುನಗುಳಿ, ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ರಾಮಚಂದ್ರ ಭಟ್ ಸ್ವಾಗತಿಸಿ, ಸುಂದರ ಬಾರಡ್ಕ ವಂದಿಸಿದರು.

