ಬಂಟರ ಸಂಘದ ವಾರ್ಷಿಕ ಮಹಾಸಭೆ-ವಿದ್ಯಾರ್ಥಿ ಸಹಾಯ ಧನ ವಿತರಣೆ
0
ಮಾರ್ಚ್ 20, 2019
ಮಂಜೇಶ್ವರ: ಬಂಟರ ಸಂಘ ಮಂಜೇಶ್ವರ ಘಟಕದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿ ಸಹಾಯ ಧನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಸಂಘದ ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಿಸಿದ ಬಂಟರ ಚಾವಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ವೇದಮೂರ್ತಿ ಕೃಷ್ಣ ಭಟ್ ಕಣ್ವತೀರ್ಥ ಅವರ ನೇತೃತ್ವದಲ್ಲಿ ಗಣಹವನ ಮತ್ತು ಪೂಜೆ ನಡೆಯಿತು. ಬಳಿಕ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.
ಬಳಿಕ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ವಿನಯಶೀಲ ಹೊಸಬೆಟ್ಟು ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ದಿವಾಕರ ಶೆಟ್ಟಿ ಕೊಳಕೆ ಅವರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಂಘದ ಹಾಲಿ ಸಮಿತಿಯನ್ನೇ ಮುಂದಿನ ವರ್ಷಕ್ಕೆ ಮುಂದುವರಿಸಲು ಸಭೆಯಲ್ಲಿ ಸರ್ವಾನುಮತದಿಂದತೀರ್ಮಾನಿಸಲಾಯಿತು. ಸಂಘದ ಅಧ್ಯಕ್ಷ ದಾಮೋದರ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಮಧ್ಯಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಸದಾನಂದ ರೈ ಅವರು ಮಾತನಾಡಿ, ಬಂಟ ಸಮುದಾಯದಲ್ಲಿ ಪ್ರತಿಯೊಬ್ಬರೂ ಸುದೃಢರಾಗಿ ಮುಖ್ಯ ವಾಹಿನಿಯೊಡನೆ ಸಾಗುವಲ್ಲಿ ಶ್ರಮ ವಹಿಸಬೇಕು ಎಂದು ತಿಳಿಸಿದರು.
ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ರವಿರಾಜ ಶೆಟ್ಟಿ ನಿಟ್ಟೆಗುತ್ತು ಮತ್ತು ಉಳ್ಳಾಲ ವಲಯ ಬಂಟರ ಸಮಗದ ಅಧ್ಯಕ್ಷ ಡಾ.ಜಯಪಾಲ ಶೆಟ್ಟಿ ತಲಪಾಡಿ ದೊಡ್ಡಮನೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು. ಮಂಜೇಶ್ವರ ಬಂಟರ ಸಂಘದ ಗೌರವಾಧ್ಯಕ್ಷ ರಘು ಶೆಟ್ಟಿ ಕುಂಜತ್ತೂರು, ಸಂಘದ ನೂತನ ಕಟ್ಟಡ ಸಮಿತಿ ಅಧ್ಯಕ್ಷ ಮೋಹನ ಶೆಟ್ಟಿ ತೂಮಿನಾಡು ಉಪಸ್ಥಿತರಿದ್ದರು.
ಮಹಾಸಭೆಯ ಅಂಗವಾಗಿ ಆಯೋಜಿಸಲಾದ ಉದ್ದ ಜಿಗಿತ ಕ್ರೀಡಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟು ರಕ್ಷಿತಾ ಡಿ.ಶೆಟ್ಟಿ ಯವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ಧನ ಸಹಾಯ ವಿತರಿಸಲಾಯಿತು.
ಬಂಟರ ಸಂಘದ ಅಧ್ಯಕ್ಷ ದಾಮೋದರ ಶೆಟ್ಟಿ ಸ್ವಾಗತಿಸಿ, ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ಮಾಡ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

