ಗೋವಾ ನೂತನ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಆಯ್ಕೆ
0
ಮಾರ್ಚ್ 19, 2019
ಪಣಜಿ: ಗೋವಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪ್ರಮೋದ್ ಸಾವಂತ್ ಅವರು ಸೋಮವಾರ ರಾತ್ರಿಯೇ ಪ್ರಮಾಣವಚನ ಸ್ವೀಕರಿಸಲಾಯಿತು.
ಮನೋಹರ್ ಪರ್ರಿಕರ್ ಅವರ ಅಕಾಲಿಕ ನಿಧನದಿಂದ ತೆರವಾದ ಗೋವಾ ಮುಖ್ಯಮಂತ್ರಿ ಸ್ಥಾನಕ್ಕೆ ಗೋವಾ ವಿಧಾನಸಭಾ ಸ್ಪೀಕರ್ ಪ್ರಮೋದ್ ಸಾವಂತ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮಿತ್ರ ಪಕ್ಷಗಳಾದ ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿಯ ಸುದಿನ್ ಧವಳಿಕರ್ ಮತ್ತು ಗೋವಾ ಪಾರ್ವಡ್ ಪಾರ್ಟಿಯ ವಿಜಯ್ ಸರ್ದೇಸಾಯಿ ಅವರನ್ನು ಉಪ ಮುಖ್ಯಮಂತ್ರಿಗಳಾಗಿ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಸರ್ಕಾರ ರಚನೆಗೆ ಯತ್ನಿಸುತ್ತಿರುವ ಹಿನ್ನಲೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡದಿರಲು ನಿನ್ನೆ ರಾತ್ರಿಯೇ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ರೇಸ್ ನಲ್ಲಿ ಬಿಜೆಪಿಯ ಹಿರಿಯ ನಾಯಕರಾದ ವಿಶ್ವಜಿತ್ ರಾಣೆ ಮತ್ತು ಪ್ರಮೋದ್ ಸಾವಂತ್ ಹೆಸರುಗಳು ಪ್ರಮುಖವಾಗಿ ಕೇಳಿ ಬಂದಿದ್ದವು. ಇದರಿಂದ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿಯ ಆಯ್ಕೆ ಕಗ್ಗಂಟಾಗಿತ್ತು. ಪಣಜಿಯ ತಾರಾ ಹೊಟೇ ವೊಂದರಲ್ಲಿ ಮೊನ್ನೆ ರಾತ್ರಿಯಿಂದ ಆರಂಭವಾದ ಸಭೆಯಲ್ಲಿ ಇದೀಗ ಪ್ರಮೋದ್ ಸಾವಂತ್ ಅವರಿಗೆ ಮುಖ್ಯಮಂತ್ರಿ ಹುದ್ದೆವಹಿಸಲು ತೀರ್ಮಾನಿಸಲಾಯಿತು.

