ಕಾಶ್ಮೀರ: ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ, ಭಾರತೀಯ ಯೋಧರಿಗೆ ಗಾಯ
0
ಮಾರ್ಚ್ 22, 2019
ಜಮ್ಮು: ಪಾಕಿಸ್ತಾನ ಸೇನೆ ಶುಕ್ರವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ರಜೌರಿಯ ನೌಶೆರಾ ಸೆಕ್ಟರ್ ನಲ್ಲಿ ಪಾಕ್ ಸೇನೆ ರಾತ್ರಿ ಇಡೀ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ರಜೌರಿ ಜಿಲ್ಲೆಯಲ್ಲಿ ನಿನ್ನೆ ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದರು.

