ನಾಳೆ `ಸ್ನೇಹ ಸ್ಪರ್ಶ' ಗ್ರಾಮೀಣ ಜಾನಪದ ಮೇಳ
0
ಮಾರ್ಚ್ 07, 2019
ಕುಂಬಳೆ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಕೇರಳ ಗಡಿನಾಡ ಘಟಕ ಕಾಸರಗೋಡು ಹಾಗೂ ಮಂಜೇಶ್ವರ ಬ್ಲಾಕ್ ಪಂಚಾಯತಿ ನೇತೃತ್ವದಲ್ಲಿ ಶಿರಿಯ ವಳಯಂ ಡಿ.ಎಂ.ಕಬಾನಾ ರೆಸೋರ್ಟ್ ಪರಿಸರದಲ್ಲಿ ನಾಳೆ(ಮಾ.9) ಬೆಳಿಗ್ಗೆ 10ರಿಂದ ಸ್ನೇಹ ಸ್ಪರ್ಶ ಎಂಬ ಗ್ರಾಮೀಣ ಜಾನಪದ ಮೇಳ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಜಸ್ಟೀಸ್ ಕೆ.ಎಲ್.ಮಂಜುನಾಥ ಉದ್ಘಾಟಿಸಲಿರುವರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷ ಎಕೆಎಂ ಅಶ್ರಫ್ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ಮುಜರಾಯಿ ಖಾತೆ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ ಕೆ.ಆರ್.ಜಯಾನಂದ, ಯಕ್ಷಧ್ರುವ ಫೌಂಡೇಶನ್ ಕುಂಬಳೆ ಘಟಕಾಧ್ಯಕ್ಷ ಎಸ್.ಜಗನ್ನಾಥ ಶೆಟ್ಟಿ ಕುಂಬಳೆ, ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ, ಜಾನಪದ ಸಂಘಟಕ ಹರೀಶ್ ನಾಯಕ್ ಕಾಪು ಉಪಸ್ಥಿತರಿರುವರು. ಬಳಿಕ ವಿವಿಧ ಜಾನಪದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.




