ಹದಿಹರೆಯದ ವಿದ್ಯಾರ್ಥಿನಿಯರಲ್ಲಿ ಜಾಗೃತಿ ತರಗತಿ
0
ಮಾರ್ಚ್ 15, 2019
ಮಂಜೇಶ್ವರ: ಮೀಂಜ ಗ್ರಾಮ ಪಂಚಾಯತಿ ಆಶ್ರಯದಲ್ಲಿ ಮೀಯಪದವಿನ ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗಾಗಿ ವಿಶೇಷ ತರಗತಿ ಇತ್ತೀಚೆಗೆ ಜರಗಿತು. ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣವೇಣಿ ಹಾಗೂ ಸಾವಿತ್ರಿ ತರಗತಿಯನ್ನು ನಡೆಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ಹಿರಿಯ ಶಿಕ್ಷಕಿ ಲಲಿತಾ ಸಂಪನ್ಮೂಲ ವ್ಯಕ್ತಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಶಾಲಾ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.

