ಪರಿಶಿಷ್ಟ ಜಾತಿ-ಪಂಗಡ ಜನಾಂದವರ ಮೇಲೆ ದೌರ್ಜನ್ಯ ತಡೆ ಕಾನೂನು : ವಿಚಾರಸಂಕಿರಣ
0
ಮಾರ್ಚ್ 15, 2019
ಕಾಸರಗೋಡು: ಪರಿಶಿಷ್ಟ ಜಾತಿ-ಪಂಗಡದವರ ವಿರುದ್ಧ ದೌರ್ಜನ್ಯ ತಡೆ ಕಾನೂನು ಸಂಬಂಧ ವಿಚಾರ ಸಂಕಿರಣ ಜರುಗಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಪ್ರಧಾನ ಭಾಷಣ ಮಾಡಿದರು. ಕಾರ್ಯಕ್ರಮವನ್ನು ಹೆಚ್ಚುವರಿ ದಂಡನಾಧಿಕಾರಿ ಸಿ.ಬಿಜು ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೇಮ್ಸ್ ಜೋಸೆಫ್ ಅಧ್ಯಕ್ಷತೆ ವಹಿಸಿದ್ದರು.
ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆ ಜಾರಿಗೊಳಿಸುವ ವಿವಿಧ ಯೋಜನೆಗಳಕುರಿತು ಬ್ಲೋಕ್ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿಗಳಾದ ಪಿ.ಬಿ.ಬಶೀರ್, ಪಿ.ವಿ.ಸತೀಷ್ ಕುಮಾರ್, ಈ ಜನಾಂಗದವರ ವಿರುದ್ಧ ದೌರ್ಜನ್ಯ ತಡೆ ಕಾನೂನು ಕುರಿತು ಜಿಲ್ಲಾ ಸರಕಾರಿ ಪ್ಲೀಡರ್ ಪಿ.ವಿ.ಜಯರಾಜನ್, ಸಹಾಯಕ ಪೊಲೀಸ್ವರಿಷ್ಠಾಧಿಕಾರಿ(ಎಸ್.ಎಂ.ಎಸ್) ಹರಿಶ್ಚಂದ್ರ ನಾಯ್ಕ್ ತರಗತಿ ನಡೆಸಿದರು.
ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಎಸ್.ಮೀನಾರಾಣಿ, ಸಹಾಯಕ ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ(ಪ್ರಭಾರ) ಎಂ.ಷಮೀನಾ ಉಪಸ್ಥಿತರಿದ್ದರು. ಪರಿಶಿಷ್ಟ ಜಾತಿಗೆ ಸೇರಿದ ಸಾಮಾಜಿಕಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ, ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆ ಸಿಬ್ಬಂದಿ, ಎಸ್.ಸಿ.ಪ್ರಮೋಟರ್ ಗಳು ಮೊದಲಾದವರು ಉಪಸ್ಥಿತರಿದ್ದರು.

