HEALTH TIPS

ಶ್ರೀಕ್ಷೇತ್ರ ಧರ್ಮಸ್ಥಳದ ಸಮಾಜಮುಖಿ ಯೋಜನೆಗೆ ಯುವ ಸಮುದಾಯದ ಬೆಂಬಲ ಅಗತ್ಯ-ಕೆ.ಶ್ರೀಕಾಂತ್- 1335 ನೇ ಮದ್ಯವರ್ಜನ ಶಿಬಿರ ಆರಂಭ


         ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಕಾಸರಗೋಡು, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೊರುವೈಲು, ಸಂಘ ಮಿತ್ರರು ದುಬೈ, ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಾಸರಗೋಡು ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜ್ಞಾನ ವಿಕಾಸ ಕೇಂದ್ರ ಮತ್ತು ನವಜೀವನ ಸಮಿತಿಗಳು ಕಾಸರಗೋಡು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಾಗು ವಿವಿಧ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 1335 ನೇ ಮದ್ಯವರ್ಜನ ಶಿಬಿರ ಕೊರುವೈಲು ಶ್ರೀ ದುರ್ಗಾಪರಮೇಶ್ವರೀ ಪ್ರಾರ್ಥನಾ ಮಂದಿರದಲ್ಲಿ ಶುಕ್ರವಾರ ಆರಂಭಗೊಂಡಿತು.
       ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯ, ನ್ಯಾಯವಾದಿ ಕೆ.ಶ್ರೀಕಾಂತ್ ಅವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಪಿಡುಗು ಮುಕ್ತ ಸಮಾಜ ನಿರ್ಮಾಣದಿಂದ ಸುಸ್ಥಿರ ಸಮಾಜ ಮತ್ತು ಅಭಿವೃದ್ದಿಹೊಂದಿದ ರಾಷ್ಟ್ರವಾಗಿ ಭಾರತವು ಗುರುತಿಸಲ್ಪಡಬೇಕಿದೆ. ಹಾದಿ ತಪ್ಪುತ್ತಿರುವ ಯುವ ಸಮಾಜವನ್ನು ಉದ್ದರಿಸುವ ನಿಟ್ಟಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಕಾರ್ಯಚಟುವಟಿಕೆಗಳು ಜಗತ್ತಿಗೆ ಮಾದರಿಯಾಗಿದ್ದು, ಸಮರ್ಪಕವಾಗಿ ಕಾರ್ಯಯೋಜನೆಗಳನ್ನು ಗುರಿತಲಪಿಸುವ ಹೊಣೆ ನಾಗರಿಕ ಸಮಾಜದ್ದಾಗಿದೆ ಎಂದು ತಿಳಿಸಿದರು.
        ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್‍ಬಾಘ್ ಅಧ್ಯಕ್ಷತೆ ವಹಿಸಿ ಮಾತನಾಡಿ ಆಧುನಿಕ ಸಾಮಾಜಿಕ ವ್ಯವಸ್ಥೆಯ ಬೆಳವಣಿಗೆಯ ಮಧ್ಯೆ ಪಿಡುಗುಗಳು ಕಪ್ಪುಚುಕ್ಕೆಯಂತೆ ಸವಾಲುಗಳಿಗೆ ಕಾರಣವಾಗುತ್ತಿದೆ. ಸೂಕ್ತ ಮಾರ್ಗದರ್ಶನ ಮತ್ತು ಅಸಮರ್ಪಕ ಅರಿವಿನಿಂದ ಯುವ ಸಮೂಹವನ್ನು ರಕ್ಷಿಸಬೇಕಿದ್ದು, ಜನಜಾಗೃತಿ ವೇದಿಕೆಯ ಮೂಲಕ ವ್ಯವಸ್ಥಿತ ಚೌಕಟ್ಟುಗಳ ಪರಿವರ್ತಿತ ಸಮಾಜ ನಿರ್ಮಾಣದ ಗುರಿ ಇರಿಸಲಾಗಿದೆ ಎಮದು ತಿಳಿಸಿದರು.
    ಯೋಜನೆಯ ಕಾಸರಗೋಡು-ದಕ್ಷಿಣ ಕನ್ನಡ ವಲಯ ನಿರ್ದೇಶಕ ಚಂದ್ರಶೇಖರ್ ಕೆ, ಧಾರ್ಮಿಕ ಮುಂದಾಳು ವೆಂಕಟರಮಣ ಹೊಳ್ಳ ಕಾಸರಗೋಡು, ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷ ತಾರಾನಾಥ ಮಧೂರು, ಸದಸ್ಯ ರಾಮಕೃಷ್ಣ ಮಜಲು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
     ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ, ಶಿಬಿರದ ಸಂಯೋಜನಾ ಸಮಿತಿ ಅಧ್ಯಕ್ಷ ಸೂರಜ್ ಶೆಟ್ಟಿ, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಶಿಬಿರಾಧಿಕಾರಿ ವಿದ್ಯಾಧರ್, ಆರೋಗ್ಯ ಸಹಾಯಕಿಯರಾದ ಚಿತ್ರಾ ಹಾಗೂ ರಂಜಿತ್ ಉಪಸ್ಥಿತರಿದ್ದರು. ಯೋಜನೆಯ ಒಕ್ಕೂಟ ಅಧ್ಯಕ್ಷ ಉದಯಕುಮಾರ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಶೋಭಾ ವಂದಿಸಿದರು.ಯೋಜನೆಯ ಮೇಲ್ವಿಚಾರಕಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿದರು. ಶಿಬಿರ ಮೇ.2 ರಂದು ಸಮಾರೋಪಗೊಳ್ಲಲಿದ್ದು, 66 ಮಂದಿ ಶಿಬಿರಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries