HEALTH TIPS

ಕೇರಳದ ವಯನಾಡು ಕ್ಷೇತ್ರದಿಂದಲೂ ರಾಹುಲ್ ಗಾಂಧಿ ಸ್ಪರ್ಧೆ; ಎ ಕೆ ಆಂಟನಿ

ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮಾಜಿ ರಕ್ಷಣಾ ಸಚಿವ ಕೇರಳದ ಕಾಂಗ್ರೆಸ್ ಹಿರಿಯ ಮುಖಂಡ ಎ ಕೆ ಆಂಟನಿ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ನಾವೆಲ್ಲರೂ ಒತ್ತಾಯಿಸಿದ್ದು ಅವರು ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿದ್ದಾರೆ ಎಂದು ಎ ಕೆ ಆಂಟನಿ ಹೇಳಿದ್ದಾರೆ. ರಾಹುಲ್ ಗಾಂಧಿ ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಅಮೇಥಿಯಿಂದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಕಳೆದ ಹಲವು ದಿನಗಳಿಂದ ಕೇಳಿಬರುತ್ತಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries