HEALTH TIPS

ಸಂಪುಟದಿಂದ ಹೊರಗುಳಿದ ಸುಷ್ಮಾ ಸ್ವರಾಜ್: ಭಾವನಾತ್ಮಕ ಟ್ವೀಟ್ ಮಾಡಿ ವಿದಾಯ ಹೇಳಿದ ನಾಯಕಿ

     
     ನವದೆಹಲಿ: ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರದಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ಹಿರಿಯ ಸಂಸದೆ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ತಾವು ವಿದಾಯದ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಿರುವ ಸುಷ್ಮಾ ಸ್ವರಾಜ್ ಕಳೆದ ಐದು ವರ್ಷಗಳ ಕಾಲ ವಿದೇಶಾಂಗ ವ್ಯವಹಾರ ಖಾತೆ ಸಚಿವರಾಗಿ ದೇಶದ ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರತಿಯೊಬ್ಬರಿಗೆ ಕೃತ ಜ್ಞ ತೆ ಹೇಳಿದ್ದಾರೆ.
     ಭಾರತೀಯ, ಅನಿವಾಸಿ ಭಾರತೀಯರಿಗೆ ಐದು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಕೊಟ್ಟ ನರೇಂದ್ರ ಮೋದಿಯವರಿಗೆ ಸುಷ್ಮಾ ಸ್ವರಾಜ್ ಕೃತ???ತೆ ಹೇಳಿದ್ದಾರೆ.
"ನಾನು ನಿಮಗೆ ಕೃತ???ಳಾಗಿದ್ದೇಏನೆ, ಸರ್ಕಾರ ಅದ್ಭುತವಾಗಿ ಮುನ್ನಡೆಯಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ." ಸ್ವರಾಜ್ ಹೇಳಿದ್ದಾರೆ.
     ವಿದೇಶದಲ್ಲಿದ್ದ ಭಾರತೀಯರ ಕಷ್ಟಗಳಿಗೆ ಸ್ಪಂದಿಸುವುದಕ್ಕಾಗಿ ಮೈಕ್ರೋ ಬ್ಲಾಗಿಂಗ್ ಸೈಟ್ ಅಳವಡಿಸಿಕೊಂಡಿದ್ದ ಸುಷ್ಮಾ ಸ್ವರಾಜ್ ಲಕ್ಷಾಂತರ ಅನಿವಾಸಿ ಭಾರತೀಯರಿಗೆ ಸಹಾಯ ಮಾಡಿದ್ದರು. ಅದರ ಮೂಲಕ ದೇಶ, ವಿದೇಶಗಳ ನಾಗರಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.
   
प्रधान मंत्री जी - आपने 5 वर्षों तक मुझे विदेश मंत्री के तौर पर देशवासियों और प्रवासी भारतीयों की सेवा करने का मौका दिया और पूरे कार्यकाल में व्यक्तिगत तौर पर भी बहुत सम्मान दिया. मैं आपके प्रति बहुत आभारी हूँ. हमारी सरकार बहुत यशस्विता से चले, प्रभु से मेरी यही प्रार्थना है.

     ಗುರುವಾರ ನರೇಂದ್ರ ಮೋದಿ ನೂತನ ಸಂಪುಟದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸುಷ್ಮಾ ಸ್ವರಾಜ್ ಪ್ರೇಕ್ಷಕರ ಸಾಲಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದ್ದಾರೆ.
ಬಿಜೆಪಿ ಹಿರಿಯ ಮಹಿಳಾ ಸದಸ್ಯರಲ್ಲಿ ಒಬ್ಬರಾದ ಸುಷ್ಮಾ ಸ್ವರಾಜ್ ಯುಪಿಎ ಅವಧಿಯಲ್ಲಿ ಹತ್ತು ವರ್ಷಗಳ ಕಾಲ ಲೋಕಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಸೇವೆ ಸಲ್ಲಿಸಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries