HEALTH TIPS

ಜುಲೈ 15ರಂದು ಚಂದ್ರಯಾನ-2 ಉಡಾವಣೆ: ಇಸ್ರೋ

       
    ಬೆಂಗಳೂರು: ಮಹತ್ವಾಕಾಂಕ್ಷೆಯ ಚಂದ್ರಯಾನ-2 ನೌಕೆಯನ್ನು ಜುಲೈ 15ರಂದು ಬೆಳಗಿನ ಜಾವ 2:51ಕ್ಕೆ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಅಧ್ಯಕ್ಷ ಡಾ. ಕೆ ಶಿವನ್ ಅವರು ಬುಧವಾರ ತಿಳಿಸಿದ್ದಾರೆ.
      ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವನ್ ಅವರು, ಜಿಎಸ್ ಎಲ್ ವಿ ಮಾರ್ಕ್ 3 ರಾಕೆಟ್ ಚಂದ್ರಯಾನ - 2ರ ಪರಿಕರಗಳನ್ನು ಹೊತ್ತೊಯ್ಯಲಿದೆ. ಸೆಪ್ಟೆಂಬರ್ 6 ಅಥವಾ 7 ರಂದು ಜಿಎಸ್ ಎಲ್ ವಿ ರಾಕೆಟ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ. ರೋವರ್(ವಿಕ್ರಂ), ಲ್ಯಾಂಡರ್ ಮತ್ತು ಆರ್ಬಿಟರ್ ಸಹಿತ 3.8 ಟನ್ ತೂಕದ ಮೂರು ಸಾಮಾಗ್ರಿಗಳನ್ನು ರಾಕೆಟ್ ಹೊತ್ತೊಯ್ಯಲಿದೆ ಎಂದು ಹೇಳಿದರು.
     15 ನಿಮಿಷಗಳ ಈ ಉಡಾವಣೆಯಲ್ಲಿ ಲ್ಯಾಂಡರ್ ಅನ್ನು ಚಂದ್ರನ ನೆಲದ ಮೇಲೆ ಇಳಿಸಲಾಗುವುದು. ಇಸ್ರೋದ ಇತಿಹಾಸದಲ್ಲೇ ಇದೊಂದು ಅತ್ಯಂತ ಕ್ಲಿಷ್ಟಕರ ಕಾರ್ಯಾಚರಣೆಯಾಗಿದೆ ಎಂದು ಶಿವನ್ ತಿಳಿಸಿದ್ದಾರೆ.
     ಚಂದ್ರನ ಅಂಗಳವನ್ನು ತಲುಪಲು ಚಂದ್ರಯಾನ-1ರ ಉಡ್ಡಯನದ ವೇಳೆ ಅನುಸರಿಸಿದ ಕಾರ್ಯತಂತ್ರವನ್ನೇ ಈ ಬಾರಿಯೂ ಅನುಸರಿಸಲಾಗುವುದು. ಆದರೆ ಸುಗಮ ಇಳಿಯುವಿಕೆ (ಸಾಫ್ಟ್ ಲ್ಯಾಂಡಿಂಗ್) ಸವಾಲು ಮಾತ್ರ ಸಂಪೂರ್ಣ ಹೊಸದು ಎಂದು ಶಿವನ್ ವಿವರಿಸಿದರು.
    ದಿಕ್ಸೂಚಿಗಾಗಿ ವಿದೇಶಿ ಸೇವೆ ಬಳಕೆಯ ಶುಲ್ಕ ಸೇರಿದಂತೆ ಯೋಜನೆಯ ಒಟ್ಟು ವೆಚ್ಚ 603 ಕೋಟಿ ರೂ.ಗಳಾಗಿದ್ದು, ಉಡ್ಡಯನಕ್ಕೆ 375 ಕೋಟಿ ರೂ ವೆಚ್ಚವಾಗುತ್ತದೆ. ಚಂದ್ರಯಾನ-2 ನಿರ್ಮಾಣದಲ್ಲಿ ಇಸ್ರೋ ಉದ್ಯಮ ಮತ್ತು ಶೈಕ್ಷಣಿಕ ವಲಯದ ತ ಜ್ಞ ರನ್ನು ಅವಲಂಬಿಸಿದೆ ಎಂದು ಅವರು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries