ಮಂಜೇಶ್ವರ: ಶಾರದಾ ಆಟ್ರ್ಸ್ ಕಲಾವಿದೆರ್ ಮಂಜೇಶ್ವರ ಮತ್ತು ಶಾರದಾ ಆಟ್ರ್ಸ್ ತಂಡದ ಐಸಿರಿ ಕಲಾವಿದೆರ್ ಮಂಜೇಶ್ವರ ಅಭಿನಯಿಸುವ `ಉತ್ತರ ಕೊರ್ಲೆ' ಮತ್ತು `ಗಿರಿಗಿಟ್ ಗಿರಿಧರೆ' ನಾಟಕಗಳ ಶುಭಮುಹೂರ್ತ ಕಡಂಬಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೂ.26 ರಂದು ಬೆಳಿಗ್ಗೆ 10 ಕ್ಕೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಅವರು ಆಶೀರ್ವಚನ ನೀಡುವರು.
ರಂಗಚಿನ್ನಾರಿ ಅಧ್ಯಕ್ಷ ಕಾಸರಗೋಡು ಚಿನ್ನಾ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭದಲ್ಲಿ ಐಸಿರಿ ಕಲಾವಿದೆರ್ ಮಂಜೇಶ್ವರ ಇದರ ನಿರ್ದೇಶಕ ನವೀನ್ ಡಿ.ಪಡೀಲ್ ಅವರನ್ನು ಸಮ್ಮಾನಿಸಲಾಗುವುದು. ಮುಖ್ಯ ಅತಿಥಿಗಳಾಗಿ ಹಿರಿಯ ರಂಗ ಕಲಾವಿದರಾದ ಕೋಳಾರು ಸತೀಶ್ಚಂದ್ರ ಭಂಡಾರಿ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಶ್ರೀ ಅಯ್ಯಪ್ಪ ಕ್ಷೇತ್ರ ಹೊಸಂಗಡಿಯ ಉದಯ ಗುರುಸ್ವಾಮಿ ಪಾವಳ, ಕಡಂಬಾರು ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್.ಎನ್.ಕಡಂಬಾರು, ಮುಡಿಮಾರು ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆ ಅಧ್ಯಕ್ಷ ರವಿ ಮುಡಿಮಾರ್, ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರ ಅಧ್ಯಕ್ಷ ಪದ್ಮನಾಭ ಕಡಪ್ಪರ, ಹೊಸಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ನವೀನ್‍ರಾಜ್, ಅಬ್ಬಕ್ಕ ಟಿ.ವಿ. ನಿರ್ದೇಶಕ ಶಶಿಧರ ಪೆÇಯ್ಯತ್ತಬೈಲು ಭಾಗವಹಿಸುವರು.

