ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತಿ ಕಜಂಪಾಡಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಬಾಲಸಭಾ ಕಾರ್ಯಕ್ರಮಗಳು ಜರಗಿತು.
ಗ್ರಾಮ ಪಂಚಾಯತಿ ಸದಸ್ಯೆ ರೂಪವಾಣಿ ಆರ್.ಭಟ್ ಉದ್ಘಾಟಿಸಿ ಯೋಗದ ಮಹತ್ವವನ್ನು ಮಕ್ಕಳಿಗೆ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಪುಟಾಣಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಿಕ್ಷಕಿಯರಾದ ಶುಭಾ ಹಾಗೂ ಭುವನೇಶ್ವರಿ ಉಪಸ್ಥಿತರಿದ್ದರು.


