ಉಪ್ಪಳ: ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕ ಉಳುವಾನ ಶಂಕರ ಭಟ್ ಭಾಗವಹಿಸಿ ಯೋಗದ ಮಹತ್ವವನ್ನು ಮಕ್ಕಳಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಸುಮಾರು 150 ಮಕ್ಕಳು ಏಕಕಾಲದಲ್ಲಿ ಸೂರ್ಯನಮಸ್ಕಾರದ ಪ್ರದರ್ಶನ ನೀಡಿದರು.
ಸಮಾರಂಭದಲ್ಲಿ ಆಡಳಿತ ಟ್ರಸ್ಟಿ ಹೆಚ್.ಮಹಾಲಿಂಗ ಭಟ್, ಕಮಲ ಟೀಚರ್ ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು. ಅಧ್ಯಾಪಕ ಶ್ರೀಕಾಂತ್ ಸ್ವಾಗತಿಸಿ, ಪ್ರಾಂಶುಪಾಲ ಅನೂಪ್.ಕೆ ವಂದಿಸಿದರು. ದೈಹಿಕ ಶಿಕ್ಷಕ ಪ್ರಕಾಶ್ ಮಾಣಿ ಕಾರ್ಯಕ್ರಮ ನಿರ್ವಹಿಸಿದರು.



