HEALTH TIPS

ಕನ್ನಡ ಸಹಿತ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ: ನಿರ್ಮಲಾ ಸೀತಾರಾಮನ್ ಪ್ರಕಟ

 
     ನವದೆಹಲಿ: ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ದಕ್ಷಿಣ ರಾಜ್ಯಗಳ ಸಂಸದರ ಬೇಡಿಕೆಗೆ ಕೇಂದ್ರ ಸರ್ಕಾರ ಕಡೆಗೂ ಮಣಿದಿದೆ.
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಇನ್ನೂ ಮುಂದೆ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ನಿನ್ನೆ  2018-19ರ ಆರ್ಥಿಕ ಸಮೀಕ್ಷೆ ಮಂಡನೆ ವೇಳೆ ತಿಳಿಸಿದರು.
       ಅಸ್ಸಾಂ, ಬೆಂಗಾಳಿ, ಕನ್ನಡ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ಒಡಿಯಾ , ಪಂಜಾಬಿ, ತೆಲುಗು, ತಮಿಳು ಮತ್ತು ಉರ್ದುವಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು.
     ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿನ ಆಫೀಸರ್ ಸ್ಕೆಲ್ 1 ಹಾಗೂ ಸಹಾಯಕರ ಹುದ್ದೆಗಳನ್ನು ಇಂಗ್ಲೀಷ್ ಮತ್ತು ಹಿಂದಿ ಜೊತೆಗೆ  13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು  ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.
    ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಕನ್ನಡಿಗರಿಗೂ ಅವಕಾಶ ಕಲ್ಪಿಸುವಂತೆ ಇತ್ತೀಚಿಗೆ ಸಂಸತ್ತಿನ ಉಭಯ ಸದನಗಳಲ್ಲಿ ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಜಿ. ಸಿ. ಚಂದ್ರಶೇಖರ್ ಕೇಂದ್ರಸರ್ಕಾರವನ್ನು ಒತ್ತಾಯಿಸಿದ್ದರು.
Examination for Regional Rural Banks to be conducted in 13 regional languages: Smt @nsitharaman@PIB_India @MIB_India @BJPLive

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries