ಮಂಜೇಶ್ವರ: ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾಸರಗೋಡು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪಾವಳ ಘಟಕದ ಸಂಯುಕ್ತ ಆಶ್ರಯದಲ್ಲಿ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮ ಜು.21 ರಂದು ಭಾನುವಾರ ವರ್ಕಾಡಿ ಸೈಂಟ್ ಜೋಸೆಫ್ ಶಾಲಾ ಸಭಾಂಗಣದಲ್ಲಿ ಬೆಳಿಗ್ಗೆ 10 ರಿಂದ ಆಯೋಜಿಸಲಾಗಿದೆ.
ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಸಭೆಯ ಉಪಸಭಾಪತಿ ಎಂ.ಕೃಷ್ಣ ರೆಡ್ಡಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕೆ.ಜಿ.ನಾಗಲಕ್ಷ್ಮೀಬಾಯಿ ಉದ್ಘಾಟಿಸುವರು. ಕಸಾಪ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ವಿಧಾನಪರಿಷತ್ತಿನ ಮಾಜಿ ಪ್ರತಿಪಕ್ಷ ಸಚೇತಕ ಕ್ಯಾಪ್ಟನ್.ಗಣೇಶ್ ಕಾರ್ಣಿಕ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಲಯ ನಿರ್ದೇಶಕ ಸತೀಶ್ ಶೆಟ್ಟಿ, ವರ್ಕಾಡಿ ಗ್ರಾ.ಪಂ.ಅಧ್ಯಕ್ಷ ಅಬ್ದುಲ್ ಮಜೀದ್, ವರ್ಕಾಡಿ ಚರ್ಚಿನ ಧರ್ಮಗುರು ಪ್ರಾನ್ಸಿಸ್ ರೋಡ್ರಿಗಸ್, ಜನಾಪದ ಪರಿಷತ್ತು ಉಡುಪಿ ಜಿಲ್ಲಾ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕುನಿಲ್ ವಿದ್ಯಾಸಂಸ್ಥೆ ಟ್ರಸ್ಟ್ ಅಧ್ಯಕ್ಷ ಡಾ.ಫಕ್ರುದ್ದೀನ್ ಕುನಿಲ್, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್‍ಭಾಗ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಕುಂಬಳೆ ಘಟಕಾಧ್ಯಕ್ಷ ಎಸ್.ಜಗನ್ನಾಥ ಶೆಟ್ಟಿ ಕುಂಬಳೆ, ಗಡಿನಾಡ ಸಾಹಿತ್ಯ-ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಸಮಾರಂಭದಲ್ಲಿ ದೈವನರ್ತಕ ಡಾ.ರವೀಶ ಪರವ ಪಡುಮಲೆ, ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರನನು ಗೌರವಿಸಲಾಗುವುದು. ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ., ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಝಡ್ ಎ.ಕಯ್ಯಾರ್, ರವಿ ನಾಯ್ಕಾಪು ಮೊದಲಾದವರು ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಜಾನಪದ ಸಾಂಸ್ಕøತಿಕ ವೈವಿಧ್ಯಮಗಳ ಪ್ರದರ್ಶನ, ಆಟಿ ತಿಂಗಳ ಹೆಗ್ಗುರುತುಗಳಾಗಿರುವ ಗ್ರಾಮೀಣ 60ರಷ್ಟು ತಿಂಡಿಗಳ ಪ್ರದರ್ಶನ ಈ ಸಂದರ್ಭ ಏರ್ಪಡಿಸಲಾಗುವುದೆಂದು ಸಂಘಟಕರು ತಿಳಿಸಿರುವರು.


