HEALTH TIPS

ಚಂದ್ರಯಾನ-2 ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ- ಇಸ್ರೋ

                     
        ಬೆಂಗಳೂರು: ಸೋಮವಾರ ನಭದತ್ತ ಚಿಮ್ಮಿದ ಚಂದ್ರಯಾನ-2 ಗಗನ ನೌಕೆ ಉತ್ತಮವಾಗಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಇಸ್ರೋ ಇಂದು ತಿಳಿಸಿದೆ.
ಚಂದ್ರಯಾನ-2 ಉಪಗ್ರಹವನ್ನು ಹೊತ್ತ ಜಿಎಸ್ ಎಲ್ ವಿ-ಮಾರ್ಕ್ 3 ವಾಹಕ ಆಂಧ್ರಪ್ರದೇಶದ ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭದತ್ತ ಚಿಮ್ಮಿತ್ತು.
        ಆರ್ಬಿಟರ್, ಲ್ಯಾಂಡರ್ ಮತ್ತು ರೋವರ್ ಗಳ ವೈ ಜ್ಞಾ ನಿಕ ಪರಿಕರಗಳನ್ನು ಹೊತ್ತ ಚಂದ್ರಯಾನ-2 ಉಪಗ್ರಹ  ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ.ಇದರಲ್ಲಿ ಯಾವುದೇ ಅನುಮಾನವಿಲ್ಲ ಪೂರ್ವ ನಿಗದಿಯಂತೆ ಸೆಪ್ಟೆಂಬರ್ 7 ರಂದು ಚಂದ್ರನ ಮೈಲ್ಮೆ ತಲುಪಲಿದೆ ಎಂದು  ಇಸ್ರೋ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
         ಈಗ ಸ್ವಲ್ಪ ಪ್ರಮಾಣದಲ್ಲಿ ಮೈಲಿಗಲು ಸಾಧಿಸಲಾಗಿದೆ.ಅದನೆಲ್ಲಾ ಈಗ ಬಹಿರಂಗಗೊಳಿಸಲು ಸಾಧ್ಯವಿಲ್ಲ. ಆದರೆ, ಆ ಸಂದರ್ಭ ಬಂದಾಗ ಎಲ್ಲವನ್ನೂ ವಿವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
        ಇಸ್ರೋ ನಿರ್ಮಿತ  ಮಹತ್ವಾಕಾಂಕ್ಷೆಯ ಚಂದ್ರಯಾನ-2 ಉಪಗ್ರಹ ಚಂದ್ರನ ಮೇಲ್ಮೆ ಬಗ್ಗೆ ಅಧ್ಯಯನ ನಡೆಸಲಿದೆ. ಇದು ಯಶಸ್ವಿಯಾದರೆ ರಷ್ಯಾ, ಅಮೆರಿಕಾ, ಚೀನಾ ನಂತರ ಚಂದ್ರನ ಪ್ರವೇಶ ಮಾಡಲಿರುವ ನಾಲ್ಕನೇ ರಾಷ್ಟ್ರ ಭಾರತವಾಗಲಿದೆ .
       ರಾಕೆಟ್ ನಿಂದ ಚಂದ್ರಯಾನ-2 ಉಪಗ್ರಹ ಪ್ರತ್ಯೇಕಗೊಂಡ ಬಳಿಕ ಬೆಂಗಳೂರಿನಲ್ಲಿರುವ  ಇಸ್ರೋ ನಿಯಂತ್ರಣ ಕೇಂದ್ರ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries