HEALTH TIPS

ಇದು ಪ್ರತ್ಯೇಕತೆಯ ಬೆದರಿಕೆಯೇ?- ಕಲಂ 370 ತಾತ್ಕಾಲಿಕವಾದರೆ, ನಾವು ಭಾರತದೊಂದಿಗೆ ಇರುವುದೂ ಕೂಡ ತಾತ್ಕಾಲಿಕವೇ: ಫಾರೂಕ್ ಅಬ್ದುಲ್ಲಾ

   
          ಶ್ರೀನಗರ: ಕಲಂ 370ಗೆ ಸಂಬಂಧಿಸಿದಂತೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಆಬ್ದುಲ್ಲಾ ತೀವ್ರ ಕೆಂಡಾಮಂಡಲರಾಗಿದ್ದಾರೆ.
        ಕಾಶ್ಮೀರ ವಿಚಾರವಾಗಿ ಸಂಸತ್ ನಲ್ಲಿ ನಡೆಯುತ್ತಿರುವ ಚರ್ಚೆಗೆ ಸಂಬಂಧಿಸಿದಂತೆ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, 'ಕಣಿವೆ ರಾಜ್ಯದಲ್ಲಿ ಕಲಂ 370 ತಾತ್ಕಾಲಿಕವಾದರೆ ನಾವು ಭಾರತದೊಂದಿಗೆ ಗುರುತಿಸಿಕೊಳ್ಳುವುದೂ ಕೂಡ ತಾತ್ಕಾಲಿಕವಾಗುತ್ತದೆ. ಮಹಾರಾಜರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾಗ ಇದು ತಾತ್ಕಾಲಿಕವೇ ಆಗಿತ್ತು. ಆದರೆ ಒಪ್ಪಂದದ ಸಮಯ ಪೂರ್ಣಗೊಂಡ ಬಳಿಕ ಜನಾಭಿಪ್ರಾಯ ಸಂಗ್ರಹಿಸಬೇಕಾಗುತ್ತದೆ. ಆಗ ಜನರೇ ನಾವು ಪಾಕಿಸ್ತಾನದೊಂದಿಗೆ ಹೋಗಬೇಕೋ ಅಥವಾ ಭಾರತದೊಂದಿಗೆ ಇರಬೇಕೋ ಎಂದು ನಿರ್ಧರಿಸುತ್ತಾರೆ. ಇದು ಅವರಿಗೆ ಬೇಡ ಎಂದಾದರೇ ಕಲಂ 370 ತೆಗೆಯುವ ಮಾತಗಳನ್ನೇಕೆ ಆಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
    ಸೋಮವಾರ ಸಂಸತ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಜಮ್ಮು-ಕಾಶ್ಮೀರ ಮೀಸಲು (ತಿದ್ದುಪಡಿ) ವಿಧೇಯಕ -2019 ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, 'ಈ ಮೀಸಲಾತಿ ಯಾರನ್ನೂ ಕೂಡ ಮೆಚ್ಚಿಸಲು ಅಲ್ಲ. ಬದಲಿಗೆ ನಿರಂತರ ಉಗ್ರರ ದಾಳಿ ಹಾಗೂ ಬಾಂಬ್ ಸ್ಪೋಟಕ್ಕೆ ತತ್ತರಿಸಿ ಹೋಗುತ್ತಿರುವ ಜನ ಮತ್ತು ವಿದ್ಯಾರ್ಥಿಗಳಿಗೆ ಆಶ್ರಯ ನೀಡಲು ಜಾರಿ ಮಾಡಬೇಕಿದೆ. ಇಂತಹ ಮಸೂದೆಯಿಂದ ಕಥುವಾ, ಸಾಂಬಾ ಮತ್ತು ಜಮ್ಮುವಿನಲ್ಲಿ ವಾಸಿಸುವ 3.5 ಲಕ್ಷ ಜನರಿಗೆ ಸಹಾಯವಾಗಲಿದೆ. ಸದ್ಯ ಕಾನೂನಿನ ಪ್ರಕಾರ ರಾಜ್ಯದಲ್ಲಿ ಶೇಕಡಾ 43 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಈ ಪೈಕಿ ಶೇ. 3ರಷ್ಟು ನಿಯಂತ್ರಣ ರೇಖೆಯ ಉದ್ದಕ್ಕೂ ವಾಸಿಸುವ ಜನರಿಗೆ ಲಭ್ಯವಾಗುತ್ತಿದೆ. ನಾವು ಜಾರಿಗೆ ಮಾಡಲಿರುವ ನೂತನ ಮಸೂದೆ ರಾಜ್ಯದ ಅಂತರಾಷ್ಟ್ರೀಯ ಗಡಿಯಲ್ಲಿ ವಾಸಿಸುವ ಜನರಿಗೆ ಶೇಕಡಾ 3 ರಷ್ಟು ಮೀಸಲಾತಿ ವಿಸ್ತರಿಸಲು ಅವಕಾಶ ನೀಡುತ್ತದೆ ಎಂದರು.
    ಗೃಹ ಸಚಿವ ಅಮಿತ್ ಶಾ ಮಂಡಿಸಿದ ಜಮ್ಮು-ಕಾಶ್ಮೀರ ಮೀಸಲು (ತಿದ್ದುಪಡಿ) ವಿಧೇಯಕ -2019 ಅನ್ನು ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಜೊತೆಗೆ ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಇನ್ನೂ ಆರು ತಿಂಗಳು ವಿಸ್ತರಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries