HEALTH TIPS

ಬಜೆಟ್: ಆದಾಯ ತೆರಿಗೆ ವಿವರ ಸಲ್ಲಿಸಲು ಪಾನ್ ಅಗತ್ಯವಿಲ್ಲ -ನಿರ್ಮಲಾ ಸೀತಾರಾಮನ್

 
        ನವದೆಹಲಿ:ಆದಾಯ ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
          ಲೋಕಸಭೆಯಲ್ಲಿ ನಿನ್ನೆ  ಕೇಂದ್ರ ಬಜೆಟ್ ಮಂಡನೆ ವೇಳೆ ಈ ವಿಷಯ ತಿಳಿಸಿದ ಅವರು, ಪಾನ್ ಕಾರ್ಡ್ ಜೋಡಣೆಗೆ ವಿನಾಯಿತಿ ನೀಡಲಾಗಿದೆ. ತೆರಿಗೆ ಪಾವತಿ ಮಾಡುವವರು ಪಾನ್ ಕಾರ್ಡ್ ಹೊಂದಿಲ್ಲದಿದ್ದರೆ ಆಧಾರ್ ಸಂಖ್ಯೆ ನಮೂದಿಸಿ ಮುಂದುವರೆಯಬಹುದು ಎಂದು ಹೇಳಿದರು.
        5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿದವರು ತೆರಿಗೆ ಪಾವತಿಸುವಂತಿಲ್ಲ ಎಂದು ಹೇಳಿದ ನಿರ್ಮಲಾ ಸೀತಾರಾಮನ್, ಮಧ್ಯಮ ವರ್ಗದವರಿಗೆ ಗೃಹ ಸಾಲಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. 15 ವರ್ಷದವರೆಗಿನ ಸಾಲಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದರು.
      ಸ್ಟಾರ್ಟ್ ಅಪ್ ಕಂಪನಿಗಳಿಗೆ ಐಟಿ ಇಲಾಖೆ ಪರಿಶೀಲನೆಯಿಂದ ವಿನಾಯಿತಿ ನೀಡಲಾಗಿದೆ. ಬ್ಯಾಂಕ್ ಖಾತೆಯಿಂದ 1 ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತ ತೆಗೆದರೆ ಶೇ, 2 ರಷ್ಟು ತೆರಿಗೆ ವಿಧಿಸಲಾಗುವುದು, ನೇರ ತೆರಿಗೆ ಸಂಗ್ರಹ ಶೇ, 78 ರಷ್ಟು ಹೆಚ್ಚಾಗಿದ್ದು, 11 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries