HEALTH TIPS

ಇಂದು ಕಾಸರಗೋಡಲ್ಲಿ ಕನ್ನಡ ಪತ್ರಿಕಾ ದಿನಾಚರಣೆ

                                   
        ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಜುಲೈ 1 ರಂದು ಕಾಸರಗೋಡು ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ.
       ಸಮಾರಂಭವನ್ನು ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಉದ್ಘಾಟಿಸುವರು. ಪತ್ರಕರ್ತರ ಸಂಘದ ಅಧ್ಯಕ್ಷ ಅಚ್ಚುತ ಚೇವಾರ್ ಅಧ್ಯಕ್ಷತೆ ವಹಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಟಿ.ಎ.ಶಾಫಿ ಹಾಗೂ ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕಾಧ್ಯಕ್ಷ ಟಿ.ಶಂಕರನಾರಾಯಣ ಭಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ಕನ್ನಡ ಪತ್ರಿಕೋದ್ಯಮ ನಡೆದುಬಂದ ದಾರಿ ಮತ್ತು ವರ್ತಮಾನ ವಿಷಯದ ಬಗ್ಗೆ ವಿಶೇಷೋಪನ್ಯಾಸ ನಡೆಯಲಿದೆ. ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಮತ್ತು ಕಾಸರಗೋಡು ಸರಕಾರಿ ಕಾಲೇಜಿನ ಉಪನ್ಯಾಸಕ ಡಾ.ರತ್ನಾಕರ ಮಲ್ಲಮೂಲೆ ಉಪನ್ಯಾಸ ನೀಡುವರು.
        

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries