ಮುಳ್ಳೇರಿಯ: ಆದೂರು ಭಗವತಿ ಕ್ಷೇತ್ರದಲ್ಲಿ ನಡೆಯಲಿರುವ ಪೆರುಂಕಳಿಯಾಟ ಮಹೋತ್ಸವದ ಯಶಸ್ವಿಗಾಗಿ ಲಕ್ಷ ದೀಪಾರ್ಚನೆ ಸೆ.29ರಂದು ನಡೆಯಲಿದೆ.
ಪೆರುಂಕಳಿಯಾಟ ಮಹೋತ್ಸವದ ಕಾರ್ಯಕಾರಿ ಸಮಿತಿಯ ಸಭೆ ಶನಿವಾರ ಆದೂರು ಭಗವತೀ ಕ್ಷೇತ್ರ ಪರಿಸರದಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷ ಕುಂಞÂರಾಮನ್ ನಾಯರ್ ಅಧ್ಯಕ್ಷತೆ ವಹಿಸಿದರು. ಆದೂರು ಪಂಚಲಿಂಗೇಶ್ವರ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ರಘುನಾಥ ಶೆಟ್ಟಿ, ಸೇವಾ ಸಮಿತಿ ಅಧ್ಯಕ್ಷ ದಾಮೋದರನ್ ಕಾವುಗೋಳಿ, ಕಾರಡ್ಕ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಜನನಿ, ಮಾಧವನ್, ಕೌನ್ಸಿಲರ್ ಮನೋಹರನ್ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರವೀಂದ್ರ ರೈ ಮಲ್ಲಾವರ ವಂದಿಸಿದರು.


