ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲಸಿನ ಸೊಳೆ ತೆಗೆದು ಉಪ್ಪಿನಲ್ಲಿ ಶೇಕರಿಸುಡುವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿತು.
ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಮಧ್ಯಾಹ್ನದ ಊಟದ ಪದಾರ್ಥಗಳಿಗೆ ಬಳಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಶಾಲೆಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಅಧ್ಯಾಪಿಕೆಯರು ವಿದ್ಯಾರ್ಥಿಗಳು ಹಾಗೂ ಶಾಲಾ ಅಡುಗೆಯವರು ಪಾಲ್ಗೊಂಡರು.


