ಮಂಜೇಶ್ವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಜರಗಲಿರುವ 39ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಡುವ ಶ್ರೀ ಮಹಾಗಣಪತಿಯ ಮೂರ್ತಿಯ ರಚನೆಯ ಮುಹೂರ್ತ ಇತ್ತೀಚೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಿತು.
ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ಮಹಾಗಣಪತಿಯ ಮೂರ್ತಿ ರಚನೆಗೆ ಮುಹೂರ್ತ ನೆರವೇರಿಸಲಾಯಿತು. ಮೂರ್ತಿ ರಚನೆಗಾರ ಮಹೇಶ್ ಆಚಾರ್ಯ ಬಾಯಾರ್ ಮುಹೂರ್ತ ನೆರವೇರಿಸಿದರು. ಈ ವೇಳೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ನ್ಯಾಯವಾದಿ ನವೀನ್ ರಾಜ್ ಕೆ.ಜೆ, ಪ್ರಧಾನ ಕಾರ್ಯದರ್ಶಿ ಅವಿನಾಶ್ ಹೆಗ್ಡೆ ಮಂಜೇಶ್ವರ, ಕೋಶಾಧಿಕಾರಿ ಸುದೀನ್ ವರ್ಕಾಡಿ, ಪ್ರಧಾನ ಸಂಚಾಲಕ ಪದ್ಮನಾಭ ಕಡಪ್ಪರ, ಗೌರವ ಸಲಹೆಗಾರರಾದ ದಿನಕರ್ ಬಿಎಂ, ಹೈಮೇಶ್ ಬಿಎಂ, ಶೇಷಪ್ಪ ಸಾಲ್ಯಾನ್, ಉಪಾಧ್ಯಕ್ಷಕರಾದ ಕೃಷ್ಣ .ಜಿ ಮಂಜೇಶ್ವರ, ರುದ್ರಪ್ಪ ಮೇಸ್ತ್ರೀ, ದೇವರಾಜ್ ಎಂ. ಎಸ್, ಕ್ಷೇತ್ರದ ಗುರುಸ್ವಾಮಿ ಉದಯ ಪಾವಳ ಸಹಿತ ಹಲವರು ಉಪಸ್ಥಿತರಿದ್ದರು. ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 2ರಿಂದ 5ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.


