ಬದಿಯಡ್ಕ: ನಾವು ತಿನ್ನುವ ಆಹಾರ, ನಮ್ಮ ದೇಹವನ್ನು ಸ್ವಚ್ಛವಾಗಿಡುವ ರೀತಿ, ದೈಹಿಕ ವ್ಯಾಯಾಮ ಇವೆಲ್ಲವೂ ನಮ್ಮ ದೇಹದ ಉತ್ತಮ ಆರೋಗ್ಯ ನಿರ್ವಹಣೆಯಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ದೈಹಿಕ ಸ್ವಚ್ಛತೆಯ ಜೊತೆಗೆ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕು.ಆ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಭಿಪ್ರಾಯಪಟ್ಟರು.
ಅವರು ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಪ್ರೌಢ ಶಾಲೆಯಲ್ಲಿ ಬದಿಯಡ್ಕ ಗ್ರಾಮ ಪಂಚಾಯತಿ ವತಿಯಿಂದ ನಿರ್ಮಿಸಿದ ನೂತನ ಶೌಚಾಲಯ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.
ಬದಿಯಡ್ಕ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸೈಬುನ್ನಿಸಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಗುತ್ತಿಗೆದಾರ ಜಗನ್ನಾಥ ರೈ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕೃಷ್ಣ ಮಣಿಯಾಣಿ ಮೊಳೆಯಾರು, ಹಿರಿಯ ಅಧ್ಯಾಪಕಿ ವಿನೋದಿನಿ ಕೆ. ಉಪಸ್ಥಿತರಿದ್ದರು. ಅಧ್ಯಾಪಕಿ ಶೈಲಜಾ ಬಿ. ಪ್ರಾರ್ಥಿಸಿದರು. ಬದಿಯಡ್ಕ ಗ್ರಾಮ ಪಂಚಾಯತಿ ಸದಸ್ಯ ಡಿ.ಶಂಕರ ಸ್ವಾಗತಿಸಿ, ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ವಂದಿಸಿದರು. ಅಧ್ಯಾಪಕ ಗೋವಿಂದ ಶರ್ಮ ಕೆ. ಕಾರ್ಯಕ್ರಮ ನಿರೂಪಿಸಿದರು.

