ಕಾಸರಗೋಡು: ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವವನ್ನು ವೈಭವಯುತವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಿದ್ಧತೆ ಸಭೆಯಲ್ಲಿ ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್ ಅಧ್ಯಕ್ಷತೆ ವಹಿಸಿದ್ದರು. ಆ.15ರಂದು ವಿದ್ಯಾನಗರದ ನಗರಸಭೆ ಸಭಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಜಿಲ್ಲಾ ಮಟ್ಟದ ಸಮಾರಂಭಗಳ ಕುರಿತು ಚರ್ಚಿಸಲಾಯಿತು. ವಿವಿಧ ತಂಡಗಳ ಪಥ ಸಂಚಲನ ಇತ್ಯಾದಿ ಕಾರ್ಯಕ್ರಮಗಳಿಗೆ ಬೇಕಾದ ಸೌಲಭ್ಯ ಏರ್ಪಡಿಸುವ ಬಗ್ಗೆ ಮಾತುಕತೆ ನಡೆಸಲಾಯಿತು. ಇದಕ್ಕಾಗಿ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ನೇಮಿಸಲಾಗಿದೆ.

