ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ತೊಟ್ಟೆತ್ತೋಡಿಯ ವಾಣೀವಿಲಾಸ ಕಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿನಿಯಾದ ಪಿ.ಯು.ಸಿ. ಯಲ್ಲಿ ಅತ್ಯಧಿಕ ಅಂಕ ಗಳಿಸಿದ ಶ್ರಾವ್ಯ ಕೆ. ಅವರನ್ನು ಗಣ್ಯರ ಸಮ್ಮುಖದಲ್ಲಿ ಇತ್ತೀಚೆಗೆ ಗೌರವಿಸಲಾಯಿತು. ಶಾಲಾ ಪ್ರಬಂಧಕ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅವರು ಶಾಲು ಹೊದಿಸಿ ಸ್ಮರಣಿಕೆಯನ್ನಿತ್ತು ಗೌರವಿಸಿದರು.