ಮಂಜೇಶ್ವರ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹೊಸಂಗಡಿ ಶ್ರೀಅಯ್ಯಪ್ಪ ಕ್ಷೇತ್ರದಲ್ಲಿ ಶ್ರೀಅಯ್ಯಪ್ಪ ಫ್ರೆಂಡ್ಸ್ ಕ್ಲಬ್ ನ ಆಶ್ರಯದಲ್ಲಿ ಜರಗಲಿರುವ 8 ನೇ ವರ್ಷದ ಹೊಸಂಗಡಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬುಧವಾರ ರಾತ್ರಿ ಹೊಸಂಗಡಿ ಶ್ರೀಅಯ್ಯಪ್ಪ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀಕ್ಷೇತ್ರದ ಸಾನಿಧ್ಯದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಪುರೋಹಿತ ತಿರುಮಲೇಶ ಆಚಾರ್ಯರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಸ್ಥೆಯ ಗೌರವಾಧ್ಯಕ್ಷ ನ್ಯಾಯವಾದಿ. ನವೀನ್ ರಾಜ್ ಕೆ.ಜೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ಹೊಸಂಗಡಿ ಶ್ರೀಅಯ್ಯಪ್ಪ ಕ್ಷೇತ್ರದ ಅಧ್ಯಕ್ಷ ಪದ್ಮನಾಭ ಕಡಪ್ಪರ, ಸಂಸ್ಥೆಯ ಅಧ್ಯಕ್ಷ ಸಂದೀಪ್ ಶಾಂತಿನಗರ ಸಹಿತ ಹಲವರು ಉಪಸ್ಥಿತರಿದ್ದರು. ಹೊಸಂಗಡಿ ಮೊಸರು ಕುಡಿಕೆ ಉತ್ಸವವು ಆಗಸ್ಟ್ 23 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಹೊಸಂಗಡಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
0
ಜುಲೈ 04, 2019