ಬದಿಯಡ್ಕ: ಬದಿಯಡ್ಕ ಶ್ರೀಉದನೇಶ್ವರ ಸೇವಾ ಸಮಿತಿ ಆಶ್ರಯದಲ್ಲಿ ಆ.9 ರಂದು ಶುಕ್ರವಾರ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಪೆರಡಾಲ ಶ್ರೀಉದನೇಶ್ವರ ದೇವಾಲಯ ಪರಿಸರದಲ್ಲಿ ಇತ್ತೀಚೆಗೆ ನಡೆಯಿತು.
ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ವೆಂಕಟಕೃಷ್ಣ ಮುಣ್ಚಿಕ್ಕಾನ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಮೊಕ್ತೇಸರ ಜಗನ್ನಾಥ ರೈ ಪೆರಡಾಲಗುತ್ತು, ವೆಂಕಟರಮಣ ಭಟ್.ಚಂಬಲ್ತಿಮಾರ್, ಸೇವಾ ಸಮಿತಿ ಸದಸ್ಯರು, ಭಕ್ತಾದಿಗಳು, ಅರ್ಚಕರು ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭ ಉಪಸ್ಥಿತರಿದ್ದರು. ಸೇವಾ ಸಮಿತಿ ಕಾರ್ಯದರ್ಶಿ ನಿರಂಜನ ರೈ ಪೆರಡಾಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.


