ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣಗಳ ಸಭೆಯನ್ನು ಏರ್ಪಡಿಸಿದ್ದಾರೆ. ಆದರೆ ಈ ಸಭೆಗೆ ಸಾಮಾಜಿಕ ಜಾಲತಾಣಗಳ ಪ್ರಮುಖ ಸಂಸ್ಥೆಗಳಾದ ಫೇಸ್ ಬುಕ್, ಟ್ವಿಟರ್ ಗೇ ಆಹ್ವಾನ ನೀಡಿಲ್ಲ.
ಶ್ವೇತ ಭವನದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಕನ್ಸರ್ವೇಟೀವ್ಸ್ ಅಥವಾ ರಿಪಬ್ಲಿಕನ್ ಚಿಂತನೆಗಳನ್ನು ಫೇಸ್ ಬುಕ್ ಹಾಗೂ ಟ್ವಿಟರ್ ಸೆನ್ಸಾರ್ ಮಾಡುತ್ತವೆ ಎಂಬುದು ಡೊನಾಲ್ಡ್ ಟ್ರಂಪ್ ಅಭಿಪ್ರಾಯವಾಗಿದೆ ಆದ್ದರಿಂದ ಆಹ್ವಾನ ನೀಡಿಲ್ಲ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆಗಳಾದ ಫೇಸ್ ಬುಕ್ ಅಥವಾ ಟ್ವಿಟರ್ ಗೆ ಆಹ್ವಾನ ನೀಡದೇ ಸಾಮಾಜಿಕ ಜಾಲತಾಣ ಶೃಂಗಸಭೆಯನ್ನು ಕಲ್ಪಿಸಿಕೊಳ್ಳುವುದೂ ಕಷ್ಟ ಆದರೆ ಟ್ರಂಪ್ ಈ ಎರಡೂ ವೇದಿಕೆಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿರುವುದು ಇದೇ ಮೊದಲಲ್ಲ.
ಫೇಸ್ ಬುಕ್ ಹಾಗೂ ಟ್ವಿಟರ್ ಎರಡೂ ರಿಪಬ್ಲಿಕನ್ ದೃಷ್ಟಿಕೋನವನ್ನು ಗೌರವಿಸುವುದಿಲ್ಲ ಎಂಬ ಕಾರಣಕ್ಕೆ ಟ್ರಂಪ್ ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


