ಮಂಜೇಶ್ವರ: ಉದ್ಯಾವರ ಗುಡ್ಡೆ ಶಾಲೆಯ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯನ್ನು ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಪಾಂಡುರಂಗ ಎಚ್. ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್ ಅಧ್ಯಕ್ಷತೆಯನ್ನು ವಹಿಸಿದರು. ಶಿಕ್ಷಕಿಯರಾದ ಮಲ್ಲಿಕಾ 2018-19ನೇ ಸಾಲಿನ ವಾರ್ಷಿಕ ವರದಿಯನ್ನು ಮತ್ತು ಪ್ರಸನ್ನ ಆಯವ್ಯಯ ವರದಿಯನ್ನು ವಾಚಿಸಿದರು.
2018-19ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳೊಂದಿಗೆ ತೇರ್ಗಡೆಯಾದ ಆಡ್ಲಿನ್ ಬರತೊಲೊಮಿಯ ವರೆದ ಮತ್ತು ಅಮೀನ ಫರ್ಹತುಲ್ ಹಾಸ್ಮಿ ಅವರನ್ನು ಸಂಘದ ವತಿಯಿಂದ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಬಳಿಕ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಯುಸಫ್ ಜಮಾಲ್ ಮತ್ತು ಮಾತೃ ಮಂಡಳಿಯ ಅಧ್ಯಕ್ಷೆಯಾಗಿ ಸೆಫಿಯ ಮತ್ತು ಉಪಾಧ್ಯಕ್ಷೆಯಾಗಿ ಸೀತಮ್ಮ ಅವರನ್ನು ಆರಿಸಲಾಯಿತು. ಕಾರ್ಯಕಾರಿ ಸಮಿತಿಗೆ ರಕ್ಷಕರನ್ನು ಆಯ್ಕೆಮಾಡಲಾಯಿತು.
ಮುಖ್ಯ ಶಿಕ್ಷಕಿ ಉದಯ ಕುಮಾರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕ ಗೋಪಾಲಕೃಷ್ಣ ಸ್ವಾಗತಿಸಿದರು. ಶಿಕ್ಷಕಿ ಜೋಶ್ನಾ ವಂದಿಸಿದರು. ನೌಕರ ಸಂಘದ ಕಾರ್ಯದರ್ಶಿ ರಾಜೇಶ್ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.
(ಚಿತ್ರ ಮಾಹಿತಿ: (1)ಉದ್ಯಾವರ ಗುಡ್ಡೆ ಶಾಲೆಯ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯನ್ನು ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಪಾಂಡುರಂಗ ಎಚ್. ಉದ್ಘಾಟಿಸಿ ಮಾತನಾಡುತ್ತಿರುವುದು, 2)ಗಿಡ ವಿತರಿಸಿ ಸ್ವಾಗತಿಸುತ್ತಿರುವುದು.)


