ಮಂಜೇಶ್ವರ: ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜನ ಜಾಗೃತಿ ವೇದಿಕೆ ಕಾಸರಗೋಡು ಜಿಲ್ಲಾ ಸಮಿತಿ ಜಂಟಿ ಆಶ್ರಯದಲ್ಲಿ ಜುಲೈ 21 ರಂದು ವರ್ಕಾಡಿಯಲ್ಲಿ ನಡೆಯುವ 'ಆಟಿಡೊಂಜಿ ದಿನ" ಕಾರ್ಯಕ್ರಮದ ಸಮಾಲೋಚನಾ ಸಭೆ ಇತ್ತೀಚೆಗೆ ವರ್ಕಾಡಿಯಲ್ಲಿ ನಡೆಯಿತು.
ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕದ ಕೋಶಾಧಿಕಾರಿ ರವಿ ನಾಯ್ಕಾಪು ಅವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ., ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಶ್ವಥ್ ಪೂಜಾರಿ ಎಂ.ಸಿ.ಲಾಲ್‍ಭಾಗ್, ಸಿದ್ದಿಕ್ ಕೆ.ಕೆ. ನಗರ್, ಝಡ್.ಎ. ಕಯ್ಯಾರು, ಎಸ್.ಜಗನ್ನಾಥ ಶೆಟ್ಟಿ. ಕುಂಬಳೆ, ಪ್ರಭಾಕರ ಕಲ್ಲೂರಾಯ ಬನದಗದ್ದೆ ಮುಂತಾದವರು ಉಪಸ್ಥಿತರಿದ್ದರು.


