ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ 2018-20ನೇ ಶೈಕ್ಷಣಿಕ ವರ್ಷದ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಶುಕ್ರವಾರ ಜರಗಿತು.
ಕಾರ್ಯಕ್ರಮದ ಅಂಗವಾಗಿ ರಕ್ಷಕ ಶಿಕ್ಷಕ ಸಂಘದ ನೂತನ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು. ಇಬ್ರಾಹಿಂ ಹೊನ್ನಕಟ್ಟೆ ಇವರು ನೂತನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಶರೀಫ್ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು. ಮಾತೃಸಂಘದ ಅಧ್ಯಕ್ಷೆಯಾಗಿ ಮಲ್ಲಿಕಾ ಹಾಗೂ ಉಪಾಧ್ಯಕ್ಷೆಯಾಗಿ ಶೀಬಾ ಇವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ತಲೇಕಳ, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಮಾತೃಸಂಗದ ಅಧ್ಯಕ್ಷೆ ಜಯಮಾಲಾ, ಶಾಲಾ ಪ್ರಾಂಶುಪಾಲ ರಮೇಶ್.ಕೆ.ಎನ್, ಹಿರಿಯ ಅಧ್ಯಾಪಕ ಶಿವಶಂಕರ ಭಟ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ಹರೀಶ್ ಕಾರ್ಯಕ್ರಮ ನಿರೂಪಿಸಿದರು.


