HEALTH TIPS

ಕೊಂಡೆವೂರಿನಲ್ಲಿ ಆ. 11 ರಂದು ಹರಿಕಥಾ ಸತ್ಸಂಗ


       ಉಪ್ಪಳ: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ತಮ್ಮ 17 ನೇ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿದ್ದು, ಈ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ. 11 ರಂದು ಭಾನುವಾರ ಸಂಜೆ 4.30 ಕ್ಕೆ ತೋನ್ಸೆ ಪುಷ್ಕಳ ಕುಮಾರ್ ರವರು ಭಗವಾನ್ ಶ್ರೀ ನಿತ್ಯಾನಂದರ ಬಗ್ಗೆ ಹರಿಕಥಾ ಸತ್ಸಂಗ ನಡೆಸಿ ಕೊಡಲಿದ್ದಾರೆ. ಅವಧೂತ ಭಗವಾನ್ ಶ್ರೀ ನಿತ್ಯಾನಂದರ ಜೀವನಚರಿತ್ರೆಯ ಅರಿವು ಪಡಕೊಳ್ಳಲು ಸದವಕಾಶವಾಗಿರುವ ಈ ಸತ್ಸಂಗದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪುಣ್ಯಭಾಜನರಾಗಬೇಕೆಂದು ಆಶ್ರಮದ ಪ್ರಕಟಣೆಯಲ್ಲಿ ವಿನಂತಿಸಿಕೊಳ್ಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries