HEALTH TIPS

ಚಂದ್ರಯಾನ-2 ಯಶಸ್ಸಿನ ರೂವಾರಿ, ಇಸ್ರೋ ಅಧ್ಯಕ್ಷ ಕೆ. ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ

       
     ಚೆನ್ನೈ: ಇಸ್ರೋ ಅಧ್ಯಕ್ಷ ಕೆ.ಶಿವನ್  ಅವರಿಗೆ ಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗುರುವಾರ  ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
    ಇತ್ತೀಚೆಗೆ ಚಂದ್ರಯಾನ--2 ಮಿಷನ್ ಅನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ಇದರ  ನೇತೃತ್ವ ವಹಿಸಿದ್ದ ಕೈಲಸಾವಾಡಿವು ಶಿವನ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ವಿ ಜ್ಞಾ ನ ತಂತ್ರ ಜ್ಞಾ ನದ ಜಗತ್ತಿನಲ್ಲಿ ಸಂತಸ ತಂದಿದೆ.
     ವಿ ಜ್ಞಾ ನ ಮತ್ತು ತಂತ್ರ ಜ್ಞಾ ನದ ಕ್ಷೇತ್ರದಲ್ಲಿ ಶಿವನ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ಶಿವನ್ ಅವರು ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಚೆನ್ನೈನಲ್ಲಿನ ಸಮಾರಂಬದಲ್ಲಿ ಪ್ರಶಸ್ತಿ ಸ್ವೀಕರಿಸಬೇಕಾಗಿತ್ತು. ಆದರೆ ಕಾರಣಾಂತರದಿಂದ ಅದು ಸಾಧ್ಯವಾಗದ ಕಾರಣ ಇಂದು ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ. ಪ್ರಶಸ್ತಿ 8 ಗ್ರಾಂ ಚಿನ್ನದ ಪದಕ, ರೂ. ಐದು ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries