HEALTH TIPS

ಕೆಜಿಎಫ್ -2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ನಿಂದ ತಡೆಯಾ ಜ್ಞೆ

 
       ಕೋಲಾರ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2  ಚಿತ್ರೀಕರಣಕ್ಕೆ ಆರಂಭಿಕ ವಿಘ್ನ ಎದುರಾಗಿದೆ. ಕೆಜಿಎಫ್ -1 ಮುಂದುವರೆದ ಭಾಗದ ಚಿತ್ರೀಕರಣಕ್ಕೆ ಜಿಲ್ಲೆಯ ಕೆಜಿಎಫ್ ಸಿವಿಲ್ ಕೋರ್ಟ್ ನಿಂದ ತಡೆಯಾ ಜ್ಞೆ  ನೀಡಲಾಗಿದೆ ಎಂದು ತಿಳಿದುಬಂದಿದೆ.
       ಕೆಜಿಎಫ್  ಚಾಪ್ಟರ್ 2 ಸಿನಿಮಾದ ಚಿತ್ರೀಕರಣಕ್ಕಾಗಿ ಕೆನಡಿಯಸ್ ಸೈನೈಡ್ ಗುಡ್ಡದ ಮೇಲೆ ದುಬಾರಿ ಸೆಟ್ ಹಾಕಲಾಗಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಆದರೆ, ಸೆಟ್ ಹಾಕುವ ವೇಳೆ ಗಿಡ ಮರಗಳನ್ನು ಹಾನಿ ಮಾಡಲಾಗಿದ್ದು, ಸ್ಥಳೀಯರಿಗೆ ತೊಂದರೆ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯ ಚಿತ್ರೀಕರಣಕ್ಕೆ ತಡೆಯಾ ಜ್ಞೆ  ನೀಡಿದೆ.
       ಚಿತ್ರೀಕರಣದಿಂದ ಪರಿಸರದ ಮೇಲೆ ಹಾನಿಯಾಗುತ್ತಿದೆ ಎಂದು ಆರೋಪಿಸಿ ಶ್ರೀನಿವಾಸ್ ಎಂಬುವರ ನ್ಯಾಯಾಲಯದ ಮೊರೆ ಹೋಗಿದ್ದರು. ಈ  ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಕೆಜಿಎಫ್-2 ಚಿತ್ರೀಕರಣಕ್ಕೆ ತಡೆಯಾ ಜ್ಞೆ  ನೀಡಿದೆ. ಈ ಮಧ್ಯೆ ನ್ಯಾಯಾಲಯದ ತಡೆಯಾ ಜ್ಞೆ  ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರ ನಿರ್ಮಾಪಕ ವಿಜಯ್ ಕಿರಗಂದೂರು, ಆದೇಶ ನೋಡಿ ನ್ಯಾಯಾಲಯಕ್ಕೆ ಸೂಕ್ತ ಉತ್ತರ ನೀಡಲಾಗುವುದು. ಈಗಾಗಲೇ ಶೇಕಡಾ 60 ರಷ್ಟು ಚಿತ್ರೀಕರಣ ಮುಗಿದಿದ್ದು, ಈ ಹಿಂದೆ ಈ ರೀತಿಯ ತೊಂದರೆ ಆಗಿರಲಿಲ್ಲ ಎಂದು ತಿಳಿಸಿದ್ದಾರೆ.
         ಕೆಜಿಎಫ್ -2ರಲ್ಲಿ ಅಧೀರನ ಪಾತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್  ಸೇರಿದಂತೆ ಮತ್ತಿತರ ನಟರು ಅಭಿನಯಿಸುತ್ತಿದ್ದು, ಗಾಂಧಿನಗರದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗ ನ್ಯಾಯಾಲಯ ನೀಡಿರುವ ಆದೇಶದಿಂದ ಚಿತ್ರೀಕರಣ ವಿಳಂಬವಾಗುತ್ತದೆಯಾ? ಎಂಬ ಪ್ರಶ್ನೆ ಮೂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries