ನವದೆಹಲಿ: ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್, ಪಕ್ಷದ ನಿಷ್ಠಾವಂತ ನಾಯಕ ಎಂದು ಹೆಸರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು ನಿನ್ನೆ ಸ್ವೀಕರಿಸಿದ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ.
ಮಾಜಿ ಪ್ರಧಾನಮಂತ್ರಿ ಡಾ. ಮನ್ ಮೋಹನ್ ಸಿಂಗ್ ಕೂಡಾ ಕಾರ್ಯಕ್ರಮದಲ್ಲಿ ಕಾಣಲಿಲ್ಲ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗಿತ್ತು. ಆದಾಗ್ಯೂ ಅವರು ಏಕೆ ಕಾರ್ಯಕ್ರಮದಿಂದ ದೂರ ಉಳಿದರು ಎಂಬುದಕ್ಕೆ ಕಾರಣ ತಿಳಿದುಬಂದಿಲ್ಲ.
ಕಾಂಗ್ರೆಸ್ ಪಕ್ಷದ ಇತರ ನಾಯಕರಾದ ಆನಂದ್ ಶರ್ಮಾ, ಅಹ್ಮದ್ ಪಟೇಲ್, ಭೂಪೇಂದ್ರ ಸಿಂಗ್ ಹೂಡಾ, ಜನಾರ್ದನ್ ದ್ವಿವೇದಿ, ಆರ್ ಪಿಎನ್ ಸಿಂಗ್, ಮತ್ತಿತರರು ಪಾಲ್ಗೊಂಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ನಂತರ ರಾಹುಲ್ ಗಾಂಧಿ ಅಷ್ಟಾಗಿ ಸಾರ್ವಜನಿಕ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲೂ ಆಗಾಗ್ಗೇ ಕಾಣಿಸಿಕೊಳ್ಳುತ್ತಾರೆ.
ಪ್ರಣಬ್ ಮುಖರ್ಜಿ ಹಾಗೂ ಆರ್ ಎಸ್ ಎಎಸ್ ಮುಖಂಡ ನಾನಾಜಿ ದೇಶ್ ಮುಖ್ , ಅಸ್ಸಾಂ ಗಾಯಕ ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.


