HEALTH TIPS

ಇಂದು ಎಡನೀರಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಕೇರಳ ಮತ್ತು ಗೋವಾ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ

       
    ಕಾಸರಗೋಡು: ಹೊರರಾಜ್ಯದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳು ಕನ್ನಡವನ್ನು ಕಲಿಯುವಂತೆ ಆತ್ಮವಿಶ್ವಾಸ ಮೂಡಿಸಿ, ಕನ್ನಡವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ *ಹೊರರಾಜ್ಯ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಇಂದು (ಭಾನುವಾರ) ಬೆಳಿಗ್ಗೆ 11ಕ್ಕೆ ಎಡನೀರು ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
      ಪುರಸ್ಕಾರವನ್ನು ಶಾಲಾಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಪುರಸ್ಕಾರವು ಪ್ರಥಮ ನಗದು ಬಹುಮಾನ ರೂ.10,000, ದ್ವಿತೀಯ ನಗದು ಬಹುಮಾನ ರೂ.9,000, ತೃತೀಯ ನಗದು ಬಹುಮಾನ ರೂ.8,000 ಗಳಲ್ಲದೆ ಪ್ರಮಾಣಪತ್ರ ಒಳಗೊಂಡಿದೆ.  ಪೋಷಕರು ಅವರ ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿಯೇ ವ್ಯಾಸಂಗ ಮಾಡುವಂತೆ ಪ್ರೇರೇಪಿಸಲು ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿ, ಅವರ ಸಮ್ಮುಖದಲ್ಲಿಯೇ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ.
      ಕಳೆದ ಆರು ವರ್ಷಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೇರಳ ರಾಜ್ಯದ 556 ವಿದ್ಯಾರ್ಥಿಗಳಿಗೆ ಮತ್ತು ಗೋವಾ ರಾಜ್ಯದ 43 ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿಯನ್ನು ನೀಡಿ ಅಭಿನಂದಿಸಲಾಗಿದೆ. ಪ್ರಸ್ತುತ 2017-18ನೇ ಸಾಲಿನಲ್ಲಿ ಕೇರಳ ರಾಜ್ಯದ 92 ಹಾಗೂ ಗೋವಾ ರಾಜ್ಯದ 06 ಒಟ್ಟು 98 ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಿ, ಸನ್ಮಾನಿಸಲಾಗುತ್ತಿದೆ.
      ಹೊರರಾಜ್ಯ ಕೇರಳ ಮತ್ತು ಗೋವಾ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಶ್ರೀ ಪಾದಂಗಳವರು ದಿವ್ಯ ಸಾನಿಧ್ಯವಹಿಸಲಿದ್ದು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಆರ್. ಜನ್ನು ಉದ್ಘಾಟಿಸುವರು. ಕಾಸರಗೋಡಿನ ಸಂಸದ ರಾಜಮೋಹನ್ ಉಣ್ಣಿತ್ತಾನ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಪಿ.ಎಸ್.ಎಡಪಡಿತ್ತಾಯ ಇವರು  ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
       ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ  ಎನ್.ಎ. ನೆಲ್ಲಿಕುನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಉದುಮ ವಿಧಾನಸಭಾ ಕ್ಷೇತ್ರದ ಶಾಸಕ ಕುಂ ಞÂ್ಞ ರಾಮನ್‍ರವರು ಗೌರವ ಉಪಸ್ಥಿತರಿರುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ ಪ್ರಾಸ್ತಾವಿಕವಾಗಿ ಮಾತನಾಡುವರು. ಜಿಲ್ಲಾಧಿಕಾರಿ ಡಾ.ಡಿ ಸಜಿತ್ ಬಾಬು, ಜಿಲ್ಲಾ ಆರಕ್ಷಕ ವರಿಷ್ಠ ಜೇಮ್ಸ್ ಜೋಸೆಫ್, ಜಿ.ಪಂ.ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್,  ಚೆಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾಹಿನಾ ಸಲೀಂ,  ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್ ಎನ್., ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಸರ್ಕಾರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಸುಜಾತ ಎಸ್. ಕಾಸರಗೋಡು, ಗಡಿನಾಡ ಘಟಕ,  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ವಿ.ಭಟ್,   ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಗದ ಜಿಲ್ಲಾಧ್ಯಕ್ಷ ರವೀಂದ್ರನಾಥ, ಕೆ.ಆರ್.,ಮಠದ ಪ್ರಬಂಧಕ ನ್ಯಾಯವಾದಿ ಐ.ವಿ.ಭಟ್, ಗೋವಾದ ಯಲ್ಲಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೈ.ಆರ್. ಬೆಳಗಲ್, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries