ಬದಿಯಡ್ಕ: ಚೆರ್ಕಳ-ಕಲ್ಲಡ್ಕ ರಸ್ತೆಯ ಕರಿಂಬಿಲದಲ್ಲಿ ಗುಡ್ಡಕುಸಿತದಿಂದ ಉಂಟಾದ ಸಮಸ್ಯೆಯನ್ನು ಪರಿಹರಿಸಲು ಸೋಮವಾರದಿಂದ ಕೆಲಸ ಕಾರ್ಯಗಳನ್ನು ಆರಂಭಿಸುವುದಾಗಿ ಲೋಕೋಪಯೋಗಿ ಇಲಾಖೆಯ ಕಾಸರಗೋಡು ಲೋಕೋಪಯೋಗಿ ಇಲಾಖಾ ಮುಖ್ಯ ಅಭಿಯಂತರ ವಿನೋದ್ ಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಬಿಜೆಪಿ ಜನಪ್ರತಿನಿಧಿಗಳು ಹಾಗೂ ನಾಗರಿಕರು ಬದಿಯಡ್ಕದಲ್ಲಿ ಲೋಕೋಪಯೋಗಿ ಇಲಾಖಾ ಕಚೇರಿಯ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ಬಳಿಕ ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್, ಬದಿಯಡ್ಕ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ ಪ್ರಭು ಕರಿಂಬಿಲ, ಬಿಜೆಪಿ ಮುಖಂಡ ಕೃಷ್ಣ ಮಣಿಯಾಣಿ ಮೊಳೆಯಾರು ಲೋಕೋಪಯೋಗಿ ಇಲಾಖೆಯ ಅಭಿಯಂತರರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಕಾಮಗಾರಿಯನ್ನು ಆರಂಭಿಸುವುದಾಗಿ ಅವರು ಭರವಸೆಯನ್ನು ನೀಡಿದರು.


