ಕಾಸರಗೋಡು: ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಗಣಪತಿ ಗುಡಿಯ ಹೊರಗಿನ ಪ್ರಾಕಾರದ ದಾರಂದ ಮುಹೂರ್ತ ವಿವಿಧ ಕಾರ್ಯಕ್ರಮಗಳೊಂದಿಗೆ ಬುಧವಾರ ಬೆಳಿಗ್ಗೆ ಜರಗಿತು.
ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರ ಅನುಗ್ರಹದೊಂದಿಗೆ ದೇವಸ್ಥಾನದ ಮುಖ್ಯ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಅವರು ದಾರಂದ ಮುಹೂರ್ತ ನೆರವೇರಿಸಿದರು.
ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ನವೀಕರಣ ನಡೆಯುತ್ತಿದ್ದು, ಈಗಾಗಲೇ ಹಲವು ಕಾಮಗಾರಿಗಳು ಪೂರ್ತಿಯಾಗಿದ್ದು, ಉಳಿದ ಕಾಮಗಾರಿ ಭರದಿಂದ ಸಾಗುತ್ತಿದೆ.
ಕಾರ್ಯಕ್ರಮದಲ್ಲಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಡಾ.ಬಿ.ಎಸ್.ರಾವ್, ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಜೊತೆ ಕಾರ್ಯದರ್ಶಿಗಳಾದ ಮಂಜುನಾಥ ಕಾಮತ್, ಮುರಳಿ ಗಟ್ಟಿ, ಪವಿತ್ರಪಾಣಿ ರತನ್ ಕುಮಾರ್ ಕಾಮಡ, ಕ್ಷೇತ್ರ ರಕ್ಷಣಾ ಸಮಿತಿ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಅಪ್ಪಯ್ಯ ನಾೈಕ್, ಬಾಲಕೃಷ್ಣ ಉಳಿಯ, ಗಣೇಶ್ ಭಟ್ ನೀರ್ಚಾಲು, ಪ್ರಭಾಶಂಕರ್, ಸಂತೋಷ್, ತುಕಾರಾಮ, ಮಧೂರು ಗ್ರಾಮ ಪಂಚಾಯತಿ ಸದಸ್ಯ ಯೋಗೀಶ್ ಎಂ.ಆರ್, ಚಂದ್ರಹಾಸ, ದೇವಸ್ಥಾನದ ಪ್ರಬಂಧಕ ಗೋಪಾಲಕೃಷ್ಣ ಭಟ್, ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳು ಹಾಗು ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.



