ಬದಿಯಡ್ಕ: ವಾಂತಿಚ್ಚಾಲು ಶ್ರೀ ಹನುಮಾನ್ ಫ್ರೆಂಡ್ಸ್ ಕ್ಲಬ್ ವತಿಯಿಂದ 18ನೇ ವಾರ್ಷಿಕೋತ್ಸವದ ಪ್ರಯುಕ್ತ ಆ.25ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಉತ್ಸವವು ವೈವಿಧ್ಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಬೆಳಗ್ಗೆ 7.30ರಿಂದ ವಿವಿಧ ಭಜನಾ ಸಂಘಗಳಿಂದ ಭಜನೆ, 10ರಿಂದ ಪುಟಾಣಿ ಮಕ್ಕಳಿಗೆ, ಬಾಲಕ ಬಾಲಕಿಯರಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ಸೂಜಿನೂಲು ಓಟ, ಕೃಷ್ಣ ವೇಷ, ಸಂಗೀತ ಕುರ್ಚಿ, ಲಿಂಬೆ ಚಮಚ, ಜಾರುಕಂಬ, ಮೊಸರು ಕುಡಿಕೆ ಮೊದಲಾದ ಸ್ಪರ್ಧೆಗಳು ನಡೆಯಲಿರುವುದು. ಸಂಜೆ 4.30ಕ್ಕೆ ಬದಿಯಡ್ಕ ಗ್ರಾ.ಪಂ.ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ನಡೆಯಲಿದೆ. 6.30ರಿಂದ ಕುಂಟಾಲುಮೂಲೆ ಚಿರಂಜೀವಿ ಯಕ್ಷಗಾನ ಕಲಾಸಂಘದವರಿಂದ ಜಯರಾಮ ಪಾಟಾಳಿ ಪಡುಮಲೆ ನಿರ್ದೇಶನದಲ್ಲಿ †`ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ' ಯಕ್ಷಗಾನ ಬಯಲಾಟ ಪ್ರದರ್ಶನವಾಗಲಿದೆ.

