ಬದಿಯಡ್ಕ: ಗೋಳಿಯಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರಸಾದರೂಪವಾಗಿ ನೀಡಿದ ಒಂದು ಲಕ್ಷರೂಪಾಯಿ ಮೊತ್ತದ ಚೆಕ್ ಅನ್ನು ಗೋಳಿಯಡ್ಕ ಶ್ರೀ ಸನ್ನಿಧಿಯಲ್ಲಿ ಹಸ್ತಾಂತರಿಸಲಾಯಿತು. ಶ್ರೀ ಕ್ಷೇತ್ರದ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ತಾಲೂಕು ಯೋಜನಾಧಿಕಾರಿ ಚೇತನಾ ಎಂ. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಡೈರೆಕ್ಟರ್ ಸತೀಶ್ ಶೆಟ್ಟಿ ಅವರು ಚೆಕ್ ಅನ್ನು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಸೋಮನಾಥ ಅವರಿಗೆ ನೀಡಿದರು. ಈ ಸಂದರ್ಭದಲ್ಲಿ ಗಂಗಾಧರ ಗೋಳಿಯಡ್ಕ, ಸುಕುಮಾರ, ಸತ್ಯನಾರಾಯಣ, ಸಂತೋಷ ಈ ಸಂದರ್ಭದಲ್ಲಿ ಜೊತೆಗಿದ್ದರು.
ಗೋಳಿಯಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ಸಹಾಯಧನ
0
ಆಗಸ್ಟ್ 17, 2019