HEALTH TIPS

ಕಾಶ್ಮೀರದಲ್ಲಿ ನಿಬರ್ಂಧಗಳು ಮುಂದುವರಿಕೆ, ಬಂಧನ ಪರಿಶೀಲನೆ: ಮುಖ್ಯ ಕಾರ್ಯದರ್ಶಿ

     
      ಶ್ರೀನಗರ: ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಣಿವೆಯಲ್ಲಿ ವಿಧಿಸಲಾಗಿದ್ದ ನಿಬರ್ಂಧಗಳು ಮುಂದುವರೆಯಲಿವೆ ಎಂದು ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರು ಶುಕ್ರವಾರ ಹೇಳಿದ್ದಾರೆ.
     ಈ ವಾರಂತ್ಯಕ್ಕೆ ನಿಬರ್ಂಧಗಳನ್ನು ಸಡಿಸಲಾಗುವುದು. ಯಾವುದೇ ಹಿಂಸಾಚಾರ ಮತ್ತು ಜೀವ ಹಾನಿಯನ್ನು ತಡೆಯುವುದಕ್ಕಾಗಿ ನಿಬರ್ಂಧಗಳನ್ನು ವಿಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
      ಕಳೆದ ಒಂದು ವಾರದಿಂದ ಕಡಿತಗೊಳಿಸಲಾಗಿದ್ದ ದೂರವಾಣಿ, ಮೊಬೈಲ್ ?ಫೋನ್? ಮತ್ತು ಇಂಟರ್ ನೆಟ್  ಸಂಪರ್ಕಗಳನ್ನು ಮರುಚಾಲನೆಗೊಳಿಸಲಾಗುತ್ತಿದೆ. ವಾರಾಂತ್ಯದಲ್ಲಿ ಶಾಲಾ-ಕಾಲೇಜುಗಳು ಮತ್ತಿತರ ಶೈಕ್ಷಣಿಕ ಸಂಸ್ಥೆಗಳು ಪುನಾರಂಭಗೊಳ್ಳಲಿವೆ ಎಂದು ಸುಬ್ರಹ್ಮಣ್ಯಂ ಅವರು ಹೇಳಿದ್ದಾರೆ.
      ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಜತೆಗೆ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್? ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಈ ನಿರ್ಧಾರವನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಕಾಶ್ಮೀರ ಕಣಿವೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಭಂಗವಾಗುವ ಜತೆಗೆ ಅಶಾಂತಿ ಉಂಟಾಗುವ ಭೀತಿ ಮೂಡಿತ್ತು. ಈ ಹಿನ್ನೆಲೆಯಲ್ಲಿ ನಿಬರ್ಂಧಗಳನ್ನು ವಿಧಿಸುವುದು ಅನಿವಾರ್ಯವಾಗಿತ್ತು ಮತ್ತು ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು. ಅಲ್ಲದೆ ವಶಕ್ಕೆ ಪಡೆದವರನ್ನು ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
    ಕಾಶ್ಮೀರ ಕಣಿವೆಯ 22 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಯಾವುದೇ ಹಿಂಸಾಚಾರ ನಡೆದ ಬಗ್ಗೆ ವರದಿಗಳು ಬಂದಿಲ್ಲ. ಇಲ್ಲೆಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ಶಾಂತಿಯುತವಾಗಿ ಸಾಗುತ್ತಿದೆ. ಐದು ಜಿಲ್ಲೆಗಳಲ್ಲಿ ರಾತ್ರಿ ವೇಳೆ ಮಾತ್ರ ಕೆಲವು ನಿಬರ್ಂಧಗಳು ಇರಲಿವೆ. ಉಳಿದ ಜಿಲ್ಲೆಗಳಲ್ಲಿ ಯಾವುದೇ ನಿಬರ್ಂಧಗಳಿರುವುದಿಲ್ಲ ಎಂದು ತಿಳಿಸಿದರು.
    ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸುಬ್ರಹ್ಮಣ್ಯಂ, ಕಾಶ್ಮೀರ ಕಣಿವೆಯಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಗಮನದಲ್ಲಿ ಇರಿಸಿಕೊಂಡು ಸೂಕ್ತವಾದ ಸಮಯದಲ್ಲಿ ಅವರನ್ನು ಗೃಹ ಬಂಧನದಿಂದ ಬಿಡುಗಡೆಗೊಳಿಸಲಾಗುವುದು ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries