HEALTH TIPS

ಪರೀಕ್ಷಾ ಶುಲ್ಕ ಹೆಚ್ಚಳ ಅನಿವಾರ್ಯವಾಗಿತ್ತು; ಸಿಬಿಎಸ್ ಇ ಸಮರ್ಥನೆ

 
      ನವದೆಹಲಿ: ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೂ ಅನ್ವಯವಾಗುವಂತೆ 10 ಹಾಗೂ 12ನೇ ತರಗತಿಯ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪರೀಕ್ಷಾ ಮೌಲ್ಯಮಾಪನ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಹಾಗೂ ಹಣಕಾಸಿನ ಕೊರತೆಯನ್ನು ನೀಗಿಸಲು ಶುಲ್ಕ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
    ರಾಜಕೀಯ ಪಕ್ಷಗಳು ಸೇರಿದಂತೆ ವಿವಿಧ ಭಾಗಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಮಂಡಳಿ, 5 ವರ್ಷಗಳ ನಂತರ ಶುಲ್ಕ ಏರಿಕೆ ಮಾಡಿರುವುದಕ್ಕೆ ಹಲವಾರು ಕಾರಣಗಳನ್ನು ನೀಡಿದೆ. ಕಾಗದಗಳ ವೆಚ್ಚದಲ್ಲಿ ಭಾರಿ ಹೆಚ್ಚಳ, ಗೌಪ್ಯ ವಸ್ತುಗಳ ಮುದ್ರಣ, ಸಾರಿಗೆ, ಸಂಗ್ರಹಣೆ ಮತ್ತು ಉಪಕರಣಗಳು, ಹೊಸ ತಾಂತ್ರಿಕ ಸಂಸ್ಕರಣೆಗಳ ಬಳಕೆಗೆ ಹೆಚ್ಚಿದ ವೆಚ್ಚಗಳು ಪರೀಕ್ಷಾ ಶುಲ್ಕದ ಹೆಚ್ಚಳಕ್ಕೆ ಕಾರಣಗಳಾಗಿವೆ ಎಂದು ತಿಳಿಸಿದೆ.
    ತರಗತಿಯ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪರೀಕ್ಷಾ ಮೌಲ್ಯಮಾಪನ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಹಾಗೂ ಹಣಕಾಸಿನ ಕೊರತೆಯನ್ನು ನೀಗಿಸಲು ಶುಲ್ಕ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries