HEALTH TIPS

ಇಂದು ಮಧ್ಯಾಹ್ನ ದೆಹಲಿಯ ನಿಗಂಬೋಧ್ ಘಾಟ್ ನಲ್ಲಿ ಅರುಣ್ ಜೇಟ್ಲಿ ಅಂತ್ಯಕ್ರಿಯೆ

     
      ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ, ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ಶನಿವಾರ ವಿಧಿವಶರಾಗಿದ್ದು, ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ.
     ದೆಹಲಿಯ ನಿಗಂಬೋಧ್ ಘಾಟನ್ ನಲ್ಲಿ ಇಂದು ಮಧ್ಯಾಹ್ನ ಅರುಣ್ ಜೇಟ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಬಿಜೆಪಿಯ ಸುಧಾಂಶು ಮಿತ್ತಲ್ ಅವರು ತಿಳಿಸಿದ್ದಾರೆ.
      ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ ಕೈಲಾಶ್ ಕಾಲೋನಿಯ ಅವರ ನಿವಾಸದಿಂದ ಬಿಜೆಪಿ ಪ್ರಧಾನ ಕಚೇರಿಗೆ ತೆಗೆದುಕೊಂಡು ಹೋಗಲಾಗುತ್ತಿದ್ದು, ಮಧ್ಯಾಹ್ನದವರೆಗೆ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ನಿಗಂಬೋಧ್ ಘಾಟ್ ಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
     66 ವರ್ಷದ ಅರುಣ್ ಜೇಟ್ಲಿ ಅವರು ಉಸಿರಾಟ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಆಗಸ್ಟ್ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries